Breaking; ಮೆಟ್ಟಿಲಿನಿಂದ ಬಿದ್ದ ಲಾಲೂ, ಆಸ್ಪತ್ರೆಗೆ ದಾಖಲು

ಪಾಟ್ನಾ, ಜುಲೈ 04; ಆರ್‌ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಸೋಮವಾರ ಮುಂಜಾನೆ 3.30ರ ಸುಮಾರಿಗೆ ಪಾಟ್ನಾದಲ್ಲಿರುವ ಪರಾಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಲಾಲೂ ಪ್ರಸಾದ್ ಯಾದವ್ ದಾಖಲಾಗಿದ್ದಾರೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

74 ವರ್ಷದ ಲಾಲೂ ಪ್ರಸಾದ್ ಯಾದವ್ ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲಾಲೂ ಪ್ರಸಾದ್‌ ಯಾದವ್‌ಗೆ ಈಗ ಎಡಭುಜದ ಮೂಳೆ ಮುರಿದು ಹೋಗಿದೆ.

RJD leader Lalu Prasad Yadav admitted to Paras Hospital in Patna

ಲಾಲೂ ಪ್ರಸಾದ್ ಯಾದವ್ ಅವರ ಭುಜ ಮತ್ತು ಮೊಣಕಾಲಿನ ಭಾಗದಲ್ಲಿ ಗಾಯಗಳಾಗಿವೆ. ಆಸ್ಪತ್ರೆಯ ನುರಿತ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾವಹಿಸಿದೆ ಎಂದು ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಾಲೂ ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ ಹಾಸಿಗೆ ಮೇಲೆ ಲಾಲೂ ಮಲಗಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ 'ನನ್ನ ಹಿರೋ ನಮ್ಮ ಅಪ್ಪ' ಅವರು ಬೇಗ ಗುಣಮುಖರಾಲಿ ಎಂದು ಬರೆದಿದ್ದಾರೆ.

ಮೇವು ಹಗರಣದಲ್ಲಿ ಅಪರಾಧಿಯಾಗಿ ಶಿಕ್ಷೆ ಅನುಭವಿಸುತ್ತಿದ್ದ ಲಾಲೂ ಪ್ರಸಾದ್ ಯಾದವ್ ಜೈಲಿನಲ್ಲಿದ್ದಾಗಲೇ ಆರೋಗ್ಯ ಹದಗೆಟ್ಟಿತ್ತು. ಬಳಿಕ ಅವರು ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅವರ ಆರೋಗ್ಯ ತೀವ್ರವಾದ ಹದಗೆಟ್ಟ ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆರೋಗ್ಯದ ಕಾರಣ ನೀಡಿ ಅವರು ಜಾಮೀನು ಪಡೆದಿದ್ದಾರೆ. ಪತ್ನಿ ರಾಬ್ರಿ ದೇವಿ ಜೊತೆಗೆ ಅವರು ಪಾಟ್ನಾದ ನಿವಾಸದಲ್ಲಿ ವಾಸವಾಗಿದ್ದರು. ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಅವರು ಗಾಯಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+