ಮೇವು ಹಗರಣ 5ನೇ ಕೇಸ್: ಲಾಲೂ ಪ್ರಸಾದ್ ಯಾದವ್ ತಪ್ಪಿತಸ್ಥ
ರಾಂಚಿ, ಫೆ.15: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್‌ಗೆ ಹಿನ್ನಡೆಯಾಗಿದೆ. ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಜಾರ್ಖಂಡ್‌ನ ಡೊರಾಂಡಾ ಖಜಾನೆಯಿಂದ 139 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಹಿಂತೆಗೆದುಕೊಂಡ ಪ್ರಕರಣದಲ್ಲಿ ಅವರು ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು.
ನಾಲ್ಕನೇ ಪ್ರಕರಣ: ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟು 30 ಲಕ್ಷ ರೂ.ಗಳ ದಂಡವನ್ನೂ ಹಾಕಲಾಗಿತ್ತು.

ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ.
ಇದಕ್ಕೂ ಮುನ್ನ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಹೊರಬಿದ್ದ ನಾಲಕು ಪ್ರಕರಣಗಳಲ್ಲೂ ದೋಷಿ ಎಂದು ಪರಿಗಣಿಸಲಾಗಿದ್ದ ಲಾಲೂ ಯಾದವ್, ಒಟ್ಟು 13.5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ಅದಕ್ಕೆ ಹೆಚ್ಚುವರಿ 7 ವರ್ಷ ಸೇರ್ಪಡೆಯಾದಂತಾಗಿದೆ. ಈ ಮೂಲಕ ನಾಲ್ಕು ಹಗರಣಗಳಿಂದ ಲಾಲೂ ಪ್ರಸಾದ್ ಯಾದವ್ ಒಟ್ಟು 20.5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಮೂರು ಪ್ರಕರಣದಲ್ಲಿ ಜಾಮೀನು:
ಲಾಲೂ ಪ್ರಸಾದ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸಾ ಖಜಾನೆಯಲ್ಲಿ 33.67 ಕೋಟಿ ಅವ್ಯವಹಾರ ಪ್ರಕರಣದ ಮೇಲೆ 2017ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳನ್ನು ಎದುರಿಸುತ್ತಿರುವ ಲಾಲೂ ಪ್ರಸಾದ್ ಅವರಿಗೆ ಮೂರು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿದೆ.
ಲಾಲೂ ಪ್ರಸಾದ್ ಆರೋಗ್ಯ ಹದಗೆಟ್ಟ ಕಾರಣ ಈಚೆಗೆ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿದ್ದು, ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಜಾಮೀನು ತಿರಸ್ಕರಿಸಲಾಗಿತ್ತು.












Click it and Unblock the Notifications