ಬಿಹಾರ: ಮೊದಲ ಹಂತದ ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಸ್ಯಾನಿಟೈಸರ್

ಪಾಟ್ನಾ, ಅಕ್ಟೋಬರ್.28: ದೇಶಾದ್ಯಂತ ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಬಿಹಾರದಲ್ಲಿ 71 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

ಕೊವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಚುನಾವಣಾ ಆಯೋಗವು ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹಿನ್ನೆಲೆ ಗಯಾ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಸಿಬ್ಬಂದಿಯು ಸ್ಯಾನಿಟೈಸರ್ ಸಿಂಪಡಿಸಿ ಶುಭ್ರಗೊಳಿಸಿದರು.

ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾಲಿನಲ್ಲಿ ನಿಂತ ಮತದಾರರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿತ್ತು. ಪ್ರತಿಯೊಬ್ಬ ಮತದಾರರು ತಮ್ಮ ಹಕ್ಕು ಚಲಾವಣೆಗೂ ಮೊದಲು ಕೈಗಳಿಗೆ ಸ್ಯಾನಿಟೈಸರ್ ಹಚ್ಚಿಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

Sanitization Work By Staff At A Polling Station In Gaya In View Of COVID-19.

ಮುಖಕ್ಕೆ ಮಾಸ್ಕ್, ಹ್ಯಾಂಡ್ ಗ್ಲೌಸ್ ಕಡ್ಡಾಯ:

ಮೊದಲ ಹಂತದ ಚುನಾವಣಾ ಮತದಾನ ಪ್ರಕ್ರಿಯೆಗೆ ನೇಮಕಗೊಂಡಿರುವ ಸಿಬ್ಬಂದಿಯ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲಾಗಿದೆ. ಪ್ರತಿಯೊಬ್ಬ ಸಿಬ್ಬಂದಿಯು ಮುಖಕ್ಕೆ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಗಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಅಭ್ಯರ್ಥಿಗಳು ಅಂದರೆ 27 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಚುರುಕಿನ ಮತದಾನ ಆರಂಭಿಸಲಾಗಿದೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+