ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಮುಜಾಫರ್ ಪುರ್ ನಲ್ಲಿ ಮತಗಟ್ಟೆಗಳಿಗೆ ಸ್ಯಾನಿಟೈಸರ್ ಸಿಂಪಡಣೆ

|
Google Oneindia Kannada News

ಪಾಟ್ನಾ, ನವೆಂಬರ್.07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ಬಿಹಾರದಲ್ಲಿ ಅಂತಿಮ ಹಂತದ ಚುನಾವಣೆಯಲ್ಲಿ 16 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಶನಿವಾರ ಆರಂಭಗೊಂಡಿದೆ.

ಕೊವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಚುನಾವಣಾ ಆಯೋಗವು ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹಿನ್ನೆಲೆ ಮುಜಾಫರ್ ಪುರ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಆರಂಭಕ್ಕೂ ಮೊದಲು ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.

ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಿನಲ್ಲಿ ನಿಂತ ಮತದಾರರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿತ್ತು. ಪ್ರತಿಯೊಬ್ಬ ಮತದಾರರು ತಮ್ಮ ಹಕ್ಕು ಚಲಾವಣೆಗೂ ಮೊದಲು ಕೈಗಳಿಗೆ ಸ್ಯಾನಿಟೈಸರ್ ಹಚ್ಚಿಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

Sanitization Work By Staff At A Polling Station In Muzaffarpur In View Of COVID-19.

ಮುಖಕ್ಕೆ ಮಾಸ್ಕ್, ಹ್ಯಾಂಡ್ ಗ್ಲೌಸ್ ಕಡ್ಡಾಯ:

ಮೊದಲ ಹಂತದ ಚುನಾವಣಾ ಮತದಾನ ಪ್ರಕ್ರಿಯೆಗೆ ನೇಮಕಗೊಂಡಿರುವ ಸಿಬ್ಬಂದಿಯ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲಾಗಿದೆ. ಪ್ರತಿಯೊಬ್ಬ ಸಿಬ್ಬಂದಿಯು ಮುಖಕ್ಕೆ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಬಿಹಾರ ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ ಮತದಾನ: ಇಲ್ಲಿದೆ ವಿವರಬಿಹಾರ ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ ಮತದಾನ: ಇಲ್ಲಿದೆ ವಿವರ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರನೇ ಹಾಗೂ ಅಂತಿಮ ಹಂತದಲ್ಲಿ 16 ಜಿಲ್ಲೆಗಳ 78 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 2.35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೂರನೇ ಹಂತದ ಚುನಾವಣೆಯ ಕಣದಲ್ಲಿ 382 ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 1204 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1094 ಪುರುಷ ಅಭ್ಯರ್ಥಿಗಳಾಗಿದ್ದರೆ, 110 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3ನೇ ಹಂತದಲ್ಲಿ ಒಟ್ಟು 2,35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಪೈಕಿ 1.23 ಕೋಟಿ ಪುರುಷ ಹಾಗೂ 1.12ರಷ್ಟು ಮಹಿಳಾ ಮತದಾರರಿದ್ದಾರೆ.

ಬಿಹಾರದಲ್ಲಿ ಅಂತಿಮ ಹಂತದ ಚುನಾವಣಾ ಕಣದಲ್ಲಿ ರಾಷ್ಟ್ರೀಯ ಜನತಾ ದಳದ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. 78 ಕ್ಷೇತ್ರಗಳ ಪೈಕಿ ಆರ್ ಜೆಡಿ 46 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, 42 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಲೋಕಜನಶಕ್ತಿ ಪಕ್ಷವು 2ನೇ ಸ್ಥಾನದಲ್ಲಿದೆ. ಜೆಡಿಯು 37, ಬಿಜೆಪಿ 35, ಎನ್ ಸಿಪಿ 31, ಕಾಂಗ್ರೆಸ್ 25, ರಾಷ್ಟ್ರೀಯ ಲೋಕ ಸಮತಾ ಪಕ್ಷ 23, ಬಹುಜನ ಸಮಾಜವಾದಿ ಪಕ್ಷ 19 ಹಾಗೂ ಸಿಪಿಐ ಪಕ್ಷದ ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದಾರೆ.

English summary
Bihar Assembly Election 2020: Sanitization Work By Staff At A Polling Station In Muzaffarpur In View Of COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X