ಬಿಹಾರ ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಶಿವಸೇನೆ ಸಜ್ಜು!

ಪಾಟ್ನಾ, ಅ. 5: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೊನೆಗೂ ನಿರ್ಧರಿಸಿದೆ. ಸುಮಾರು 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಾತಿ ರಾಜಕಾರಣವೇ ಮುಖ್ಯವಾಗಿದ್ದು, ಅದರ ಬದಲಿಗೆ ಕಾರ್ಮಿಕ ಕಾಯ್ದೆ ಮತ್ತು ಕೃಷಿ ಸಂಬಂಧಿತ ಮಸೂದೆಗಳು, ಉದ್ಯೋಗ ಖಾತ್ರಿ ಬಗ್ಗೆ ದನಿಯೆತ್ತಲು ಶಿವಸೇನೆ ಮುಂದಾಗಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದರು. ''50 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಲಾಗಿದೆ. ನಾನು ಬಿಹಾರಕ್ಕೆ ತೆರಳಿ ಈ ಬಗ್ಗೆ ಸಭೆ ನಡೆಸಿ ಪಕ್ಷದ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ'' ಎಂದಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ವಿರುದ್ಧ ದನಿಯೆತ್ತಿದ್ದ ಮಾಜಿ ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಅವರು ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಒಂದು ವೇಳೆ ಅವರು ಕಣಕ್ಕಿಳಿದರೆ ಅವರ ವಿರುದ್ಧ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜಯ್, ಕಾದು ನೋಡಿ ಎಂದರು.

Shiv Sena likely to contest 30-40 seats in Bihar: Raut

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+