• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Video: ಬಿಹಾರದಲ್ಲಿ ಕಾಂಗ್ರೆಸ್ ಪ್ರಚಾರದ ವೇಳೆ ಕುಸಿದ ವೇದಿಕೆ

|

ಪಾಟ್ನಾ, ಅಕ್ಟೋಬರ್.29: ಬಿಹಾರ ವಿಧಾನಸಭಾ ಚುನಾವಣೆಯು ದಿನಕ್ಕೊಂದು ಕೌತಕಗಳಿಗೆ ಕಾರಣವಾಗುತ್ತಿದೆ. ಪ್ರತಿನಿತ್ಯ ವಿಶೇಷ ಮತ್ತು ವಿಚಿತ್ರ ಘಟನೆಗಳು ವರದಿಯಾಗುತ್ತಿವೆ. ಇದರ ನಡುವೆ ಗುರುವಾರವೊಂದು ಅವಘಡ ಕೂದಲೆಳೆಯಲ್ಲಿ ತಪ್ಪಿದೆ.

ಪಶ್ಚಿಮ ಚಂಪಾರನ್ ನಲ್ಲಿ ಬಗಾಹಿ ದಿಯೋರಜ್ ಪ್ರದೇಶದಲ್ಲಿ ಕಾಂಗ್ರೆಸ್ ಪರವಾಗಿ ಪಕ್ಷದ ಮುಖಂಡ ಪ್ರತಾಪ್ ಗರ್ಹಿ ಮತ್ತು ಅಖಿಲೇಶ್ ಸಿಂಗ್ ಭರ್ಜರಿ ಪ್ರಚಾರ ನಡೆಸಿದ್ದರು. ಸಾರ್ವಜನಿಕ ವೇದಿಕೆ ಮೇಲೆ ನಿಂತ ಕಾಂಗ್ರೆಸ್ ನಾಯಕರು ಹಾಡು ಹಾಡುತ್ತಿದ್ದರು.

ಬಿಹಾರ: 2 ಹಂತದ ಚುನಾವಣೆಯ 389 ಕಲಿಗಳ ವಿರುದ್ಧ ಕ್ರಿಮಿನಲ್ ಕೇಸ್!

ಸಾರ್ವಜನಿಕ ವೇದಿಕೆ ಮೇಲೆ ನಿಂತು ಮತದಾರರ ಓಲೈಕೆಗಾಗಿ ಹಾಡು ಹಾಡುತ್ತಿದ್ದ ಸಂದರ್ಭದಲ್ಲೇ ವೇದಿಕೆಯು ದಿಢೀರನೇ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ವೇದಿಕೆ ಕುಸಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಿಹಾರದಲ್ಲಿ ಮೂರು ಹಂತದಲ್ಲಿ ಮತದಾನ:

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರಂದು ಎರಡನೇ ಹಂತದಲ್ಲಿ 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಂತಿಮವಾಗಿ ನವೆಂಬರ್.07ರಂದು ಮೂರನೇ ಹಂತದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್.10ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಹೊರ ಬೀಳಲಿದೆ.

English summary
Stage Collapsed During A Public Rally Of Congress Party In Bihar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X