ಕೊರೊನಾ ಹರಡುವಿಕೆ ತಡೆಯಲು ದಿಟ್ಟ ಹೆಜ್ಜೆ ಇಟ್ಟ ಬಿಹಾರ
ಪಾಟ್ನಾ, ಮೇ 08 : ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಬಿಹಾರ ದಿಟ್ಟ ಹೆಜ್ಜೆ ಇಟ್ಟಿದೆ. ಇದುವರೆಗೂ ರಾಜ್ಯದಲ್ಲಿ 556 ಪ್ರಕರಣಗಳು ದಾಖಲಾಗಿದ್ದು, 5 ಜನರು ಮೃತಪಟ್ಟಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ರಾಜ್ಯದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ಲಾಕ್ ಡೌನ್ ಮುಗಿದರೂ ಬಿಹಾರ ಮುಂದಿದೆ ದೊಡ್ಡ ಸವಾಲು
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಕ್ಷಣದಿಂದಲೇ ರ‍್ಯಾಂಡಮ್ ಟೆಸ್ಟ್ ಆರಂಭಿಸಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಇದರಿಂದಾಗಿ ರಾಜ್ಯದಲ್ಲಿ ಸೋಂಕಿನ ಹರಡುವಿಕೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.
ಬಿಹಾರ: ಒಂದೇ ಕುಟುಂಬದ 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು
ವಿವಿಧ ರಾಜ್ಯಗಳಿಂದ ಬಿಹಾರಕ್ಕೆ ಕಾರ್ಮಿಕರು ವಾಪಸ್ ಆಗುತ್ತಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡಲು ನಿಗದಿತ ಕಾರ್ಯಾಚರಣೆ ವಿಧಾನ (ಎಸ್‌ಓಪಿ) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೊನಾ ಸೋಂಕಿತರು 3 ದಿನಕ್ಕೆ ವಾಸನೆ ಗ್ರಹಿಕೆ ಶಕ್ತಿ ಕಳೆದುಕೊಳ್ಳುತ್ತಾರೆ
ಗ್ರಾಮ ಮತ್ತು ಪಂಚಾಯಿತಿ ಮಟ್ಟದಲ್ಲಿ ಇರುವ ಕ್ವಾರಂಟೈನ್ ಕೇಂದ್ರದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಕಾರ್ಮಿಕರು ಆಗಮಿಸಿದ ಬಳಿಕ 21 ದಿನ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ನಿರ್ದೇಶನ ನೀಡಲಾಯಿತು.
ಬಿಹಾರ ರಾಜ್ಯದ 38 ಜಿಲ್ಲೆಗಳ ಪೈಕಿ 32 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರು ಇದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ ಆದ್ದರಿಂದ, ಜನರು ಅಲ್ಲಿಂದ ಪರಾರಿಯಾಗುತ್ತಿದ್ದಾರೆ ಎಂಬ ವರದಿಗಳಿವೆ. ಈ ಬಗ್ಗೆ ಗಮನಹರಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಹೇಳಿದರು.