ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ; ಸುಪ್ರೀಂ

|
Google Oneindia Kannada News

ಪಾಟ್ನಾ, ಆಗಸ್ಟ್ 28 : ಕೋವಿಡ್ 19 ಕಾರಣದಿಂದಾಗಿ ವಿಧಾನಸಭೆ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಬಿಹಾರ ರಾಜ್ಯ ಕೋವಿಡ್‌ನಿಂದ ಮುಕ್ತವಾಗುವ ತನಕ ವಿಧಾನಸಭೆ ಚುನಾವಣೆ ಮುಂದೂಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಬಿಹಾರ ಚುನಾವಣೆ: ನಿತೀಶ್ ಹಣೆಬರಹ ಬದಲಿಸಬಹುದಾದ ಐದು ಅಂಶಗಳಿವುಬಿಹಾರ ಚುನಾವಣೆ: ನಿತೀಶ್ ಹಣೆಬರಹ ಬದಲಿಸಬಹುದಾದ ಐದು ಅಂಶಗಳಿವು

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಚುನಾವಣಾ ಆಯೋಗ ಎಲ್ಲವನ್ನೂ ನೋಡಿಕೊಳ್ಳಲಿದೆ ಎಂದು ಹೇಳಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿಲ್ಲ ಅಷ್ಟರಲ್ಲಿಯೆ ಸಲ್ಲಿಸುವ ಈ ಅರ್ಜಿ ಮಾನ್ಯ ಮಾಡುವುದಿಲ್ಲ ಎಂದು ಹೇಳಿತು.

ಕೊರೊನಾ ಭೀತಿಯ ನಡುವೆಯೂ ಬಿಹಾರ ಚುನಾವಣೆ ಸಿದ್ಧತೆ ಕೊರೊನಾ ಭೀತಿಯ ನಡುವೆಯೂ ಬಿಹಾರ ಚುನಾವಣೆ ಸಿದ್ಧತೆ

Supreme Court Refused To Postpone Bihar Assembly Elections

ಕೋವಿಡ್ ಕಾರಣಕ್ಕಾಗಿ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕು ಎಂಬ ವಾದ ಮಾನ್ಯ ಮಾಡಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ಅಧಿಕಾರದ ಬಗ್ಗೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕೊರೊನಾ ಸಮಯದಲ್ಲಿ ಬಟ್ಟ ಬಯಲಾದ ನಿತೀಶ್ ಕುಮಾರ್ ಸಾಧನೆ ಕೊರೊನಾ ಸಮಯದಲ್ಲಿ ಬಟ್ಟ ಬಯಲಾದ ನಿತೀಶ್ ಕುಮಾರ್ ಸಾಧನೆ

"ಏನು ಮಾಡಬೇಕು ಎಂದು ನ್ಯಾಯಾಲಯ ಚುನಾವಣಾ ಆಯೋಗಕ್ಕೆ ಹೇಳಲು ಬರುವುದಿಲ್ಲ. ಎಲ್ಲವನ್ನೂ ಚುನಾವಣಾ ಆಯೋಗವೇ ತೀರ್ಮಾನಿಸಲಿದೆ" ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಬಿಹಾರದಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 1,28,850. 662 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರದ ಅವಧಿ ಅಕ್ಟೋಬರ್‌ನಲ್ಲಿ ಮುಗಿಯಲಿದೆ. 243 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ.

English summary
Supreme Court of India on Friday refused to entertain a PIL seeking to defer the assembly polls till the Bihar state is free of the novel Coronavirus. COVID-19 cannot be a ground for postponing the elections said top court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X