ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗೇರ್ ಗುಂಡಿನ ದಾಳಿ: ತೇಜಸ್ವಿ ಯಾದವ್ ತೀವ್ರ ಖಂಡನೆ

|
Google Oneindia Kannada News

ಪಾಟ್ನಾ,ಅಕ್ಟೋಬರ್ 28: ಬಿಹಾರದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ ರಾಜ್ಯದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಮುಂಗೇರ್ ನಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆಗೆ ಮಹಾಘಟಬಂಧನ (ಮಹಾಮೈತ್ರಿ) ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಬಿಹಾರದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಗಲಭೆ: ಓರ್ವ ಸಾವು ಬಿಹಾರದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಗಲಭೆ: ಓರ್ವ ಸಾವು

ಬಿಹಾರದ ಮುಂಗೇರ್ ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನಿನ್ನೆ ಗಲಭೆ ಏರ್ಪಟ್ಟಿತ್ತು. ಈ ವೇಳೆ ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ನಡೆದಿರುವ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.

Tejashwi Yadav Condemns Munger Firing

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಆರ್'ಜೆಡಿ ನಾಯಕ ತೇಜಸ್ವಿ ಯಾದವ್ ಅವರು, ಪೊಲೀಸರು ನಡೆಸಿರುವ ಗುಂಡಿನ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ಕೈವಾಡವಿದೆ. ಜನರಲ್ ಡೈಯರ್ ಆಗಲು ನಿಮಗೆ ಯಾರು ಅನುಮತಿ ನೀಡಿದ್ದರು ಎಂಬುದನ್ನು ನಾವು ಉಪಮುಖ್ಯಮಂತ್ರಿ ಸುಶೀಲ್ ಮೋದಿಯವರನ್ನು ಪ್ರಶ್ನಿಸುತ್ತಿದ್ದೇವೆ? ಘಟನೆ ಕುರಿತು ಹೈಕೋರ್ಟ್ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸಂದರ್ಭದಲ್ಲಿ ಕೆಲವರು ಪೊಲೀಸರೇ ಸ್ಥಳದಲ್ಲಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ. ಈ ವಿಡಿಯೋ ಕುರಿತ ಸತ್ಯ ಹೊರಬರಬೇಕಿದೆ.

English summary
Opposition leaders Tejashwi Yadav and Chirag Paswan have attacked Bihar's incumbent Chief Minister Nitish Kumar over the alleged clashes between the police and some "anti-social" elements in Bihar's Munger on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X