ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಸಿಡಿಲಿಗೆ 33 ಮಂದಿ ಸಾವು

|
Google Oneindia Kannada News

ಪಾಟ್ನಾ, ಮೇ 21: ಕಳೆದ ರಾತ್ರಿ ಬಿಹಾರದ 16 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿಗೆ 33 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಚಂಡಮಾರುತಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ. ಈ ಜನರ ಸಾವಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಿಎಂ ನಿತೀಶ್ ಕುಮಾರ್ ಮೃತ ಅವಲಂಬಿತರಿಗೆ ತಕ್ಷಣವೇ ನಾಲ್ಕು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

1 ತರಗತಿ, 3 ಶಿಕ್ಷಕರು, ಬೋರ್ಡ್ ಮೇಲೆ ಹಿಂದಿ, ಉರ್ದು ಕಲಿಕೆ!1 ತರಗತಿ, 3 ಶಿಕ್ಷಕರು, ಬೋರ್ಡ್ ಮೇಲೆ ಹಿಂದಿ, ಉರ್ದು ಕಲಿಕೆ!

ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಚಂಡಮಾರುತದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆ ಭಾಗಲ್ಪುರ ಆಗಿದೆ. ಭಾಗಲ್ಪುರದಲ್ಲಿ ಸಿಡಿಲು ಬಡಿದು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಜಾಫರ್‌ಪುರದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಮಧ್ಯಾಹ್ನ ಬಿಹಾರದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆ ಆರಂಭವಾಗಿತ್ತು. ಈ ವೇಳೆ ಕೆಲವೆಡೆ ಮರಗಳು ದರೆಗುರುಳಿದ್ದು ತಾಸುಗಟ್ಟಲೆ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಇದಾದ ಬಳಿಕ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಜನ ಪ್ರಾಣ ಕಳೆದುಕೊಂಡಿರುವ ಸುದ್ದಿ ಬಂದಿದೆ.

Thunderstorm and rain created havoc in 16 districts of Bihar, 33 people lost their lives due to lightning

ಆದರೆ, ಸಿಡಿಲು ಬಡಿದು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಅಂಕಿಅಂಶ ಆರಂಭದಲ್ಲಿ ಬಹಿರಂಗವಾಗಿಲ್ಲ. ಆದರೆ ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿಡಿಲು ಬಡಿದು 33 ಮಂದಿ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಅಲ್ಲದೆ ಬೆಳೆಗೆ ಭಾರಿ ಹಾನಿಯಾಗುವ ನಿರೀಕ್ಷೆಯೂ ಇದೆ. ಸಂತ್ರಸ್ತರಿಗೆ ಎಲ್ಲಾ ಹಂತಗಳಲ್ಲಿ ಸಹಾಯ ಮಾಡಲಾಗುತ್ತಿದೆ ಎಂದು ಸರ್ಕಾರ ಹೇಳುತ್ತದೆ.

Thunderstorm and rain created havoc in 16 districts of Bihar, 33 people lost their lives due to lightning

ಚಂಡಮಾರುತದಿಂದ ಆಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಶುಕ್ರವಾರ ಟ್ವೀಟ್ ಮಾಡಿ, 'ರಾಜ್ಯದ 16 ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ 33 ಜನ ಸಾವನ್ನಪ್ಪಿದ್ದಾರೆ. ಪ್ರವಾಹಕ್ಕೆ ಸಿಲುಕಿರುವವರಿಗೆ ರಕ್ಷಣೆ ನೀಡುವಂತೆ ಸೂಚನೆ ನೀಡಲಾಗಿದೆ. ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಲಾಗಿದೆ. ಜೊತೆಗೆ ಗುಡುಗು ಸಹಿತ ಮಳೆಯಾಗದಂತೆ ವಿಪತ್ತು ನಿರ್ವಹಣಾ ಇಲಾಖೆ ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸಸಲು ಸೂಚಿಸಲಾಗಿದೆ. ಜನರಿಗೆ ಮನೆಯಲ್ಲಿಯೇ ಇರಲು ಮತ್ತು ಕೆಟ್ಟ ವಾತಾವರಣದಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.

English summary
Heavy rains were reported in Bihar's 16 districts last night, leaving 33 people dead. The storm, on the other hand, has destroyed property worth millions of rupees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X