ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಸ್ಪತ್ರೆಗೆ ದಾಖಲು

|
Google Oneindia Kannada News

ಪಾಟ್ನಾ/ನವದೆಹಲಿ, ಸೆ. 11: ಕೇಂದ್ರ ಆಹಾರ ಹಾಗೂ ಪಡಿತರ ಸರಬರಾಜು ಖಾತೆ ಸಚಿವ, ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಮ್ ವಿಲಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಪುತ್ರ ಚಿರಾಗ್ ಸಲಹೆಯಂತೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಎಲ್ ಜೆಪಿ ವಕ್ತಾರರು ಹೇಳಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಳ್ಳಲಾಗಿದ್ದು, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ದೇಶದಲ್ಲಿ ಆಹಾರ, ಪಡಿತರ ಪೂರೈಕೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಮಯಕ್ಕೆ ಸರಿಯಾಗಿ ಸಂತ್ರಸ್ತರಿಗೆ ನೆರವು ನೀಡುವಲ್ಲಿ ಇಲಾಖೆ ಯಾವುದೇ ಹಿಂದೇಟು ಹಾಕಿಲ್ಲ. ಈ ಪ್ರಯತ್ನದಲ್ಲಿ ಅಸ್ವಸ್ಥನಾದರೂ ಆಸ್ಪತ್ರೆ ಸೇರಲು ಆಗಿರಲಿಲ್ಲ.

Union Minister Ram Vilas Paswan hospitalised

ಪಾಸ್ವಾನ್ vs ಮಾಂಝಿ vs ನಿತೀಶ್, ಬಿಜೆಪಿಗೆ ಪೀಕಲಾಟ ಪಾಸ್ವಾನ್ vs ಮಾಂಝಿ vs ನಿತೀಶ್, ಬಿಜೆಪಿಗೆ ಪೀಕಲಾಟ

ನನ್ನ ಆರೋಗ್ಯದ ಸ್ಥಿತಿಯನ್ನು ಕಂಡ ಪುತ್ರ ಚಿರಾಗ್ ಒತ್ತಾಯಿಸಿ ನನ್ನನ್ನು ಆಸ್ಪತ್ರೆಗೆ ಕರೆತಂದಿದ್ದಾನೆ. ನನ್ನ ಪುತ್ರ ನನ್ನ ಜೊತೆ ಇದ್ದಾನೆ ಎಂಬುದೇ ಸಂತಸದ ಸಂಗತಿ. ನನ್ನ ಆರೋಗ್ಯ ವಿಚಾರಿಸಿಕೊಳ್ಳುವುದರ ಜೊತೆಗೆ ಪಕ್ಷವನ್ನು ಬಿಹಾರ ಚುನಾವಣೆಗೆ ಸಜ್ಜುಗೊಳಿಸುತ್ತಿದ್ದಾನೆ. ಪಕ್ಷದ ಕಾರ್ಯಕರ್ತರು ಯುವ ನೇತಾರನ ಬೆನ್ನಿಗೆ ನಿಂತು ಹೊಸ ಭವಿಷ್ಯ ರೂಪಿಸುತ್ತಾರೆ ಎಂಬ ಭರವಸೆ ಇದೆ, ಆದಷ್ಟು ಬೇಗ ನಾನು ಗುಣಮುಖನಾಗಿ ನಿಮ್ಮ ಸೇವೆಗೆ ಲಭ್ಯವಾಗುತ್ತೇನೆ ಎಂಬರ್ಥದಲ್ಲಿ ಮೂರು ಸರಣಿ ಟ್ವೀಟ್ ಮಾಡಿದ್ದಾರೆ.

2000ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕ ಜನಶಕ್ತಿ ಪಕ್ಷ ಆರಂಭಿಸಿದರು. 80, 90 ರ ದಶಕದಲ್ಲಿ ದಮನಿತರು ಶೋಷಿತರಿಗೆ ಮೇಲ್ವರ್ಗದ ಮೇಲಿದ್ದ ಸಿಟ್ಟು ಆಕ್ರೋಶಕ್ಕೆ ದನಿಯಾಗಿ ದಲಿತ ನಾಯಕ ಎನಿಸಿಕೊಂಡರು. ಸದ್ಯ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

 ಎಲ್ ಜೆಪಿ ಜೆಡಿಯು ಮೈತ್ರಿ, ಚಿರಾಗ್ ನಿರ್ಣಯವೇ ಅಂತಿಮ! ಎಲ್ ಜೆಪಿ ಜೆಡಿಯು ಮೈತ್ರಿ, ಚಿರಾಗ್ ನಿರ್ಣಯವೇ ಅಂತಿಮ!

ತಮ್ಮನ್ನು ಸಿಎಂ ಅಭ್ಯರ್ಥಿ ಎಂಬಂತೆ ಬಿಂಬಿಸಿ ಕೊಂಡಿರುವ ಚಿರಾಗ್ ಪಾಸ್ವಾನ್ ಅವರು ಸ್ಥಳೀಯರ ಅಗತ್ಯಕ್ಕೆ ದನಿಯಾದರು. ''ಬಿಹಾರ ಮೊದಲು, ಬಿಹಾರಿ ಮೊದಲು'' ಎಂಬ ಘೋಷವಾಕ್ಯ ಹೊರ ತಂದರು.

Recommended Video

Indo China Clash : ಇದು ಅಪ್ಪಟ ಸುಳ್ಳು, ಇಲ್ಲಿದೆ ಸತ್ಯವಾದ ಕಥೆ | Oneindia Kannada

ಕೊವಿಡ್ 19 ಸಾಂಕ್ರಾಮಿಕ ಸಂದರ್ಭದಲ್ಲಿ ಜನರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಿರಾಗ್ ನಾಯಕತ್ವ ವಹಿಸಿಕೊಳ್ಳಬೇಕು ಎಂಬುದು ಯುವ ಜನಾಂಗದ ಒಕ್ಕೊರಲ ಬೇಡಿಕೆಯಾಗಿದೆ ಎಂದು ಎಲ್ ಜೆಪಿ ಹೇಳಿಕೊಂಡಿದೆ.

English summary
Ram Vilas Paswan, Union Minister of Consumer Affairs, Food & Public Distribution, has been hospitalised after his health deteriorated. Paswan, founder of Lok Janshakti Party (LJP) informed of his health in a series of tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X