ಬಿಹಾರದಲ್ಲಿ ಬಿಜೆಪಿ ಗೆಲುವಿನ 'ವೋಟ್ ಸೀಕ್ರೆಟ್' ತಿಳಿಸಿದ ಮೋದಿ

ಪಾಟ್ನಾ, ನವೆಂಬರ್.11: ಬಿಹಾರ ವಿಧಾನಸಭಾ ಚುನಾವಣೆ ಮತ್ತು ದೇಶದ ಹಲವೆಡೆ ನಡೆದ ಉಪ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಗೆಲುವಿನ ನಗೆ ಬೀರುವುದಕ್ಕೆ ಲಕ್ಷಾಂತರ ಮಹಿಳೆಯರ ಮೌನವಾಗಿ ಬಿಜೆಪಿಗೆ ನೀಡಿದ ಮತಗಳೇ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿ ಪ್ರಧಾನಿ ಮೋದಿ ಮಾತನಾಡಿದರು. "ನಾನು ಮಂಗಳವಾರದಿಂದಲೂ ಸುದ್ದಿ ವಾಹಿನಿಗಳನ್ನು ನೋಡುತ್ತಿದ್ದೇನೆ, ಪತ್ರಿಕೆಗಳನ್ನು ಓದಿದ್ದೇನೆ. ಎಲ್ಲ ಕಡೆಗಳಲ್ಲೂ ಬಿಜೆಪಿಯ ಗೆಲುವಿನ ಕಾರಣ ಏನು ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಬಿಜೆಪಿ ಗೆಲುವಿಗೆ ದೇಶದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರ ಮತಗಳೇ ಮುಖ್ಯ ಕಾರಣ. ದೇಶದ ಮಹಿಳಾ ಮತಗಳೇ ಬಿಜೆಪಿ ಪಾಲಿಗೆ ದೊಡ್ಡ ಶಕ್ತಿ ಆಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲುವು ಸಾಧಿಸುವುದಕ್ಕೆ ಕಾರಣವೇ ಅಭಿವೃದ್ಧಿ ಮಂತ್ರವಾಗಿದೆ. ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮಂತ್ರದ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಸರ್ಕಾರಕ್ಕೆ ಮತದಾರರು ಅಧಿಕಾರವನ್ನು ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 Who Is The Silent Voters For BJP: PM Narendra Modi Reveals The Secret

ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿ ಆದವರಿಗೆ ಧನ್ಯವಾದ:

ಬಿಹಾರದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ ಮತ್ತು ಸುರಕ್ಷಿತ ರೀತಿಯಲ್ಲಿ ಮತದಾನ ನಡೆದಿರುವುದು ಭಾರತೀಯರೆಲ್ಲ ಹೆಮ್ಮ ಪಡುವ ವಿಷಯವಾಗಿದೆ. ಕೊವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದೇ ದೊಡ್ಡ ಸವಾಲು ಆಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವಾಗಿರುವ ಚುನಾವಣೆಯನ್ನು ಯಶಸ್ವಿ ಮತ್ತು ಸುರಕ್ಷಿತವಾಗಿ ಆಚರಿಸಲಾಗಿದೆ.

ಈ ಬಾರಿ ನಡೆದ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಮರು-ಮತದಾನ ನಡೆದಿಲ್ಲ ಎನ್ನುವುದು ಮತ್ತೊಂದು ವಿಶೇಷವಾಗಿತ್ತು. ಭಾರತೀಯ ಚುನಾವಣಾ ಆಯೋಗ, ಸ್ಥಳೀಯ ಆಡಳಿತ ಮತ್ತು ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+