ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಮತ್ತೊಂದು ಎಫ್‌ಐಆರ್

|
Google Oneindia Kannada News

ಇತ್ತೀಚೆಗೆ ನಡೆದ ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆನ್ನುವ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರರಾದ ನೂಪುರ್ ಶರ್ಮಾ ವಿರುದ್ಧ ಕೋಂಡ್ವಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ಎಫ್‌ಐಆರ್ ದಾಖಲಾಗಿದೆ.

ನ್ಯಾಶಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಾಜಿ ಕಾರ್ಪೊರೇಟರ್, ಕೊಂಡ್ವಾ ನಿವಾಸಿ ಅಬ್ದುಲ್ ಗಫೂರ್ ಅಹ್ಮದ್ ಪಠಾಣ್ (47) ಅವರು ಶರ್ಮಾ ವಿರುದ್ಧ ದೂರು ದಾಖಲಿಸಿದ್ದಾರೆ. ಮೇ 28 ರಂದು ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ಪರಿಶೀಲಿಸಿದ ನಂತರ ಶರ್ಮಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಅಬ್ದುಲ್ ಗಫೂರ್ ಅಹ್ಮದ್ ಆರೋಪಿಸಿದ್ದಾರೆ.

Alleged comments against Prophet Mohammed: Another FIR against Nupur Sharma

ಶರ್ಮಾ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153B (ಆರೋಪಗಳು, ರಾಷ್ಟ್ರೀಯ-ಏಕೀಕರಣಕ್ಕೆ ಹಾನಿಕರವಾದ ಸಮರ್ಥನೆಗಳು) ಮತ್ತು 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು), 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಉಚ್ಚರಿಸುವ ಪದಗಳು, ಇತ್ಯಾದಿ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಮೇಲೆ ಕೋಂಡ್ವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರವಾದಿ ಮೊಹಮ್ಮದರನ್ನು ಟೀಕಿಸಿದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಕೇಸ್ಪ್ರವಾದಿ ಮೊಹಮ್ಮದರನ್ನು ಟೀಕಿಸಿದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಕೇಸ್

ಆರಂಭದಲ್ಲಿ ಶಾರ್ಮಾ ವಿರುದ್ಧ ದೂರು ಸ್ವೀಕರಿಸಲು ಪೊಲೀಸರು ಸಿದ್ದರಿರಲಿಲ್ಲ. ಆದರೆ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಸೇರಿದಂತೆ ಹಲವಾರು ಮುಸ್ಲಿ ಸಂಘಟನೆಗಳು ಒಗ್ಗೂಡಿದಾಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪಠಾಣ್ ಆರೋಪಿಸಿದ್ದಾರೆ. ಶರ್ಮಾ ಮಾಡಿರುವ ಕಾಮೆಂಟ್‌ಗಳು ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಮಾಜಿ ಕಾರ್ಪೊರೇಟರ್ ಪಠಾಣ್ ಎಫ್‌ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕೊಂಡ್ವಾ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಹೇಳಿದ್ದಾರೆ.

Alleged comments against Prophet Mohammed: Another FIR against Nupur Sharma

ಇದೇ ಕಾನೂನು ನಿಬಂಧನೆಗಳ ಅಡಿಯಲ್ಲಿ ಮುಂಬೈನಲ್ಲಿ ಶರ್ಮಾ ವಿರುದ್ಧ ಈ ಹಿಂದೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು.

(ಒನ್ಇಂಡಿಯಾ ಸುದ್ದಿ)

English summary
An FIR was registered late Tuesday night at Kondhwa police station against Bharatiya Janata Party (BJP) spokesman Nupur Sharma on charges of making a defamatory statement against the Prophet Mohammed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X