ಪುಣೆಯಲ್ಲಿ ಕೊರೊನಾ ಕಾಟ: ಮಾರ್ಚ್.14ರವರೆಗೂ ರಾತ್ರಿ ನಿಷೇಧಾಜ್ಞೆ

ಪುಣೆ, ಫೆಬ್ರವರಿ.28: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪುಣೆಯಲ್ಲಿ ರಾತ್ರಿ ನಿಷೇಧಾಜ್ಞೆಯನ್ನು ಮಾರ್ಚ್.14ರವರೆಗೂ ಮುಂದುವರಿಸುವುದಾಗಿ ಮಹಾನಗರ ಪಾಲಿಕೆ ಮೇಯರ್ ಮುರಳೀಧರ್ ಮೋಹಲ್ ಸ್ಪಷ್ಟಪಡಿಸಿದ್ದಾರೆ.

ಕೊವಿಡ್-19 ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್.14ರವರೆಗೂ ರಾತ್ರಿ ಕರ್ಫ್ಯೂ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಶಾಲೆ-ಕಾಲೇಜು ಮತ್ತು ಖಾಸಗಿ ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ.

ಪುಣೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ ಹೊರತಾಗಿ ಎಲ್ಲ ರೀತಿಯ ಸಾರ್ವಜನಿಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಪುಣೆ ಪಾಲಿಕೆ ಮೇಯರ್ ಮುರಳೀಧರ್ ಮೋಹಲ್ ತಿಳಿಸಿದ್ದಾರೆ.

 Amid Coronavirus Raise, Night Curfew Extended At Pune Till March 14.

ಮಹಾರಾಷ್ಟ್ರದಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣ:

ಭಾರತದಲ್ಲಿ ವರದಿಯಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಅತಿಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲೇ ಪತ್ತೆಯಾಗಿವೆ. ಮಹಾರಾಷ್ಟ್ರ ರಾಜ್ಯವೊಂದರಲ್ಲೇ 21,46,777 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ವೈದ್ಯಕೀಯ ತಪಾರಸಣೆಯಲ್ಲಿ ದೃಢಪಟ್ಟಿದೆ. ಈ ಪೈಕಿ 20,20,951 ಸೋಂಕಿತರು ಗುಣಮುಖರಾಗಿದ್ದರೆ, 52,092 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 72530 ಕೊವಿಡ್-19 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+