ಮಹಾರಾಷ್ಟ್ರ: ಚಲಿಸುತ್ತಿದ್ದ ಬಸ್ಸಿನಲ್ಲಿ ಯುವಕನ ಬರ್ಬರ ಹತ್ಯೆ

ಪುಣೆ, ಜೂನ್ 13: ಚಲಿಸುತ್ತಿರುವ ಬಸ್ಸಿನೊಳಗೆ ಯುವಕನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಖೇದ್ ತೆಹ್‌ ಸಿಲ್‌ ಜಿಲ್ಲೆಯ ದವಾಡಿಯಲ್ಲಿ ನಡೆದಿದೆ.

ಮೃತ ಯುವಕ ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿ ವಿರುದ್ಧ ದೂರು ದಾಖಲಿಸಿದ್ದ, ಇದರಿಂದ ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಆರೋಪಿ ಹೊಂಚು ಹಾಕಿದ್ದ, ಹೀಗಾಗಿ ಆರೋಪಿಯಿದ್ದ ಬಸ್ಸಿಗೆ ಹತ್ತಿದ್ದ ಯುವಕನನ್ನು ಕಂಡ ಆರೋಪಿ ಚಲಿಸುತ್ತಿದ್ದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಬೆಚ್ಚಿ ಬಿದ್ದಿದ್ದಾರೆ. ಅಲ್ಲದೇ ಕಿರುಚಿದ್ದಾರೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಬಸ್ ನಿಲುಗಡೆಯಾಗುತ್ತಿದ್ದಂತೆಯೇ ಆರೋಪಿ ಇಳಿದು ಪರಾರಿಯಾಗಲು ಯತ್ನಿಸಿದ್ದಾನೆ. ಇದಾದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

Barbaric murder in running bus in Maharashtra

ಮೃತ ಯುವಕನ ಸಹೋದರಿಯ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್‌ ಮಾಡಿದ್ದ, ಈ ಕುರಿತು ಯುವತಿ ತನ್ನ ಕುಟುಂಬದವರು ಸಂಬಂಧಿಕನೊಬ್ಬನ ಮೇಲೆ ಶಂಕಿಸಿ ಆತನ ವಿರುದ್ಧ ದೂರು ದಾಖಲಿಸಿದ್ದರು.

ಆ ದೂರಿನಲ್ಲಿ ಯುವತಿಯ ಫೋಟೋದೊಂದಿಗೆ ಅಶ್ಲೀಲ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆಂದು ತಿಳಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಕ್ರೈಂ ಬ್ರ್ಯಾಂಚ್ ಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಆರೋಪಿ ಸೇಡು ತೀರಿಸಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮಂಗಳವಾರ ಬೆಳಗ್ಗೆ ಮೃತ ಯುವಕ ದಾವಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತಿದ್ದಾನೆ. ಈ ಬಸ್ಸಿನಲ್ಲಿ ಶಂಕಿತನು ಕೂಡ ಇದ್ದನು. ಆದ್ರೆ ಯುವಕ ಮಾತ್ರ ಇದನ್ನು ಗಮನಿಸಿರಲಿಲ್ಲ. ಬಸ್ ಚಲಿಸಲು ಆರಂಭಿಸಿತ್ತು. ಕೂಡಲೇ ಹಿಂದಿದ್ದ ಶಂಕಿತ ಸಂಬಂಧಿಕ ನೇರವಾಗಿ ಯುವಕನ ಬಳಿ ಬಂದು ಹರಿತವಾದ ಆಯುಧದಿಂದ ದಾಳಿ ಮಾಡಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+