ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಒಂದರ ಹಿಂದೊಂದು ಅಗ್ನಿ ಅನಾಹುತ

|
Google Oneindia Kannada News

ಪುಣೆ, ಮಾರ್ಚ್ 27: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಸತತ ಅಗ್ನಿ ಅನಾಹುತದ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರ ಮಧ್ಯರಾತ್ರಿ, ಮಾಲ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡು ನಾಲ್ಕನೆಯ ಮಹಡಿಯಲ್ಲಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಂದಿ ಕೋವಿಡ್ ರೋಗಿಗಳು ಮೃತಪಟ್ಟ ಬೆನ್ನಲ್ಲೇ, ಇನ್ನೂ ಎರಡು ಕಡೆ ಬೆಂಕಿ ಅವಘಡ ನಡೆದಿದೆ.

ಪುಣೆಯ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಶುಕ್ರವಾರ ತಡ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾರುಕಟ್ಟೆ ಪ್ರದೇಶದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ, ಕೆಲವೇ ಕ್ಷಣಗಳಲ್ಲಿ ಸುತ್ತಮುತ್ತಲೂ ಇರುವ ಗುಡಿಸಲು ಮತ್ತಿತರ ಕಟ್ಟಡಗಳಿಗೆ ಆವರಿಸಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವುಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು

ಫ್ಯಾಷನ್ ಸ್ಟ್ರೀಟ್‌ನಲ್ಲಿ ಉಡುಪು, ಚಪ್ಪಲಿ, ಆಭರಣ ಮತ್ತಿತರ ವಸ್ತುಗಳನ್ನು ಮಾರುವ ಸುಮಾರು 500 ಅಂಗಡಿಗಳಿದ್ದು, 400ಕ್ಕೂ ಅಧಿಕ ಅಂಗಡಿಗಳು ಬೆಂಕಿಯ ಜ್ವಾಲೆಗೆ ಸುಟ್ಟು ಕರಕಲಾಗಿವೆ. ಕೋಟಿಗಟ್ಟಲೆ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಸತತ ಎರಡೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Fire Breaks Out At Punes Fashion Street And Mumbais Prabhadevi Area

ಇನ್ನೊಂದೆಡೆ ಮುಂಬೈನ ಪ್ರಭಾದೇವಿ ಪ್ರದೇಶದಲ್ಲಿನ ಎಲೆಕ್ಟ್ರಿಕ್ ವೈರ್‌ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಸುಮಾರು 15 ಅಗ್ನಿಶಾಮಕ ವಾಹನಗಳು ಧಾವಿಸಿವೆ.

English summary
Two more fire breaks out were reported in Maharashtra after a fire incident killed 10 Covid patients in an hospital. Massive fire reported in Pune and Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X