ಕೊರೊನಾ ಲಸಿಕೆ ಉತ್ಪಾದನಾ ಕೇಂದ್ರ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಬೆಂಕಿ ಅವಘಡ

ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದೆ.

ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 Fire Breaks Out At Serum Institute Of India In Pune

ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.

ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+