ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಣೆ ಸೆರಂ ಇನ್ ಸ್ಟಿಟ್ಯೂಟ್ ಬೆಂಕಿ ಅವಘಡ; ಐವರು ಕಾರ್ಮಿಕರ ದುರ್ಮರಣ

|
Google Oneindia Kannada News

ಪುಣೆ, ಜನವರಿ 21: ಪುಣೆಯಲ್ಲಿನ ಕೊರೊನಾ ಲಸಿಕೆ "ಕೋವಿಶೀಲ್ಡ್" ಉತ್ಪಾದನಾ ಸಂಸ್ಥೆ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಸಂಸ್ಥೆಯ ಟರ್ಮಿನಲ್ ಗೇಟ್ 1 ಒಳಗಿನ SEZ 3 ಕಟ್ಟಡದ ನಾಲ್ಕನೇ ಹಾಗೂ ಐದನೇ ಮಹಡಿಯಲ್ಲಿ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿಆರ್ ಎಫ್ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದವು.

ಕೊರೊನಾ ಲಸಿಕೆ ಉತ್ಪಾದನಾ ಕೇಂದ್ರ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಬೆಂಕಿ ಅವಘಡಕೊರೊನಾ ಲಸಿಕೆ ಉತ್ಪಾದನಾ ಕೇಂದ್ರ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಬೆಂಕಿ ಅವಘಡ

ಬೆಂಕಿ ಅವಘಡದ ವೇಳೆ ಕಟ್ಟಡದಲ್ಲಿದ್ದ ಆರು ಮಂದಿಯನ್ನು ರಕ್ಷಿಸಲಾಗಿತ್ತು. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಸೆರಂ ಇನ್ ಸ್ಟಿಟ್ಯೂಟ್ ನ ಸಿಇಒ ಅದಾರ್ ಪೂನವಾಲಾ ತಿಳಿಸಿದ್ದರು. ಆದರೆ ಗಂಟೆಗಳ ನಂತರ ಬೆಂಕಿ ನಂದಿಸುವ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಐವರ ಮೃತದೇಹಗಳು ಪತ್ತೆಯಾಗಿವೆ. ಇವರೆಲ್ಲರೂ ಕಟ್ಟಡ ಕಾರ್ಮಿಕರಾಗಿದ್ದರು ಎಂದು ಪುಣೆ ಮೇಯರ್ ಮುರಳೀಧರ ಮೋಹೊಲ್ ತಿಳಿಸಿದ್ದಾರೆ.

 Five People Dies At Fire Accident In Serum Institute Of India At Pune

ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ವೆಲ್ಡಿಂಗ್ ನಡೆಯುವ ವೇಳೆ ಬೆಂಕಿ ಹತ್ತಿಕೊಂಡಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿರುವುದಾಗಿ ಮೇಯರ್ ಮಾಹಿತಿ ನೀಡಿದ್ದಾರೆ.

ಕಾರ್ಮಿಕರ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಸಿಇಒ ಅದಾರ್ ಪೂನಾವಾಲಾ, "ಸಂಸ್ಥೆಯ ಅಗ್ನಿ ಅನಾಹುತದಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿರುವ ಸಂಗತಿ ಬೆಳಕಿಗೆ ಬಂದಿದೆ. ಇದು ಅತ್ಯಂತ ನೋವಿನ ಸಂಗತಿ" ಎಂದು ಟ್ವೀಟ್ ಮಾಡಿದ್ದಾರೆ.

English summary
Five people dies and six rescued at fire accident in Serum Institute of india at Pune
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X