ಎಫ್ ಟಿಐಐ ಪ್ರತಿಭಟನೆ : ಐವರು ವಿದ್ಯಾರ್ಥಿಗಳು ಪೊಲೀಸರ ವಶ

ಪುಣೆ, ಆಗಸ್ಟ್ , 19 : ಎಫ್‌ಟಿಐಐ ನಿರ್ದೇಶಕ ಗಜೇಂದ್ರ ಚೌಹಾಣ್ ಅವರನ್ನು ವಜಾಗೊಳಿಸಬೇಕೆಂದು ಹೋರಾಟ ನಡೆಸುತ್ತಿದ್ದ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ(ಎಫ್‌ಟಿಐಐ)ನ ವಿದ್ಯಾರ್ಥಿಗಳಲ್ಲಿ, ಐವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದಲ್ಲಿ ತರಗತಿಗಳ ಮುಂದುವರಿಕೆಗಾಗಿ ಸ್ಥಳಾವಕಾಶ ನೀಡುವುದಾಗಿ ಹೇಳಿದ್ದಾರೆ.[ಎಫ್ ಟಿಐಐ ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಬಲ]

FTII crackdown: Five held, police say more arrests likely

ಎಫ್‌ಟಿಐಐನ ನಿರ್ದೇಶಕರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ. ಈ ಸಂಬಂಧ ಚೌಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಟಿಐಐನ ಮೂರು ಯುವತಿಯರು ಸೇರಿದಂತೆ ಒಟ್ಟು 30 ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡ ಪೊಲೀಸರು, ತಮ್ಮ ಬಳಿ ಇದ್ದ 17 ಜನರ ಪಟ್ಟಿಯಲ್ಲಿ ಐವರನ್ನು ಮಾತ್ರ ವಶಕ್ಕೆ ತೆಗೆದುಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರತಿಭಟನೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಂಸದೆ ರಮ್ಯ ಸೇರಿದಂತೆ ಹಲವಾರು ಗಣ್ಯರಿಂದ ಬೆಂಬಲ ವ್ಯಕ್ತವಾಗಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಾಡಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+