ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 17 ಬಲಿ
ಪುಣೆ, ಏಪ್ರಿಲ್ 10: ಮಹಾರಾಷ್ಟ್ರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಇದೇ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮಹಾರಾಷ್ಟ್ರದ ಖಂಡಾಲಾ ಸಮೀಪದ ಪುಣೆ-ಸತಾರಾ ಹೆದ್ದಾರಿಯಲ್ಲಿ ಈ ಭಯಾನಕ ಅಪಘಾತ ಸಂಭವಿಸಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಮರಿಗೆ ಶಾಲಾ ಬಸ್ ಉರುಳಿ ಬಸ್ಸಿನಲ್ಲಿದ್ದ ಐದರಿಂದ ಹನ್ನೊಂದು ವರ್ಷ ವಯೋಮಾನದ 27 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಈ ಅಪಘಾತ ಸಂಭವಿಸಿದೆ.












Click it and Unblock the Notifications