ಪುಣೆಯ ಬಟ್ಟೆ ಗೋದಾಮಿನಲ್ಲಿ ಬೆಂಕಿ: ಗಾಢ ನಿದ್ದೆಯಲ್ಲಿದ್ದ ಐವರ ಸಜೀವ ದಹನ

ಪುಣೆ, ಮೇ 09: ಮಹಾರಾಷ್ಟ್ರದ ಪುಣೆ ಬಳಿಯ ಹಳ್ಳಿಯೊಂದರಲ್ಲಿ ಬಟ್ಟೆಯ ಗೋದಾಮಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ಐವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಗುರುವಾರ ಬೆಳಗ್ಗಿನ ಜಾವ ಪುಣೆ ಬಳಿಯ ಉರುಲಿ ದೆವಾಚಿ ಎಂಬ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಗೋದಾಮಿನಲ್ಲಿ ಕಾರ್ಮಿಕರು ಗಾಢ ನಿದ್ದೆಯಲ್ಲಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ.

Many killed in fire accident in Pune

ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕಳೆದ ವರ್ಷ ಡಿಸೆಂಬರ್ ನಲ್ಲಿಮುಂಬೈಯ ಬಹುಮಹಡಿ ಕಟ್ಟಡವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಪರಿಣಾಮ ಐವರು ದುರ್ಮರಣಕ್ಕೀಡಾಗಿದ್ದರು.

ಮುಂಬೈಯ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತರಾಗಿದ್ದರು. ಅಂಧೇರಿ ಉಪನಗರದ ಮರೋಲ್ ನಲ್ಲಿರುವ ಸರಕಾರ ನಡೆಸುವ ಇಎಸ್ ಐಸಿ ಕಾಮ್ ಗರ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿತ್ತು. 7 ಅಂತಸ್ತಿನ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ರಬ್ಬರ್ ನಂಥ ಕೆಲವು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಬೆಂಕಿ ಇಲ್ಲಿಂದಲೇ ಆರಂಭವಾಗಿದೆ ಎನ್ನಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+