'ಮಿಂಚಿನ ನೋಂದಣಿ'ಗೆ ಭರ್ಜರಿ ಪ್ರತಿಕ್ರಿಯೆ, 6.45 ಲಕ್ಷ ಅರ್ಜಿ ಸ್ವೀಕಾರ

ಬೆಂಗಳೂರು, ಏಪ್ರಿಲ್ 10: ಏಪ್ರಿಲ್ 8ರಂದು ಚುನಾವಣಾ ಆಯೋಗ 'ಮಿಂಚಿನ ನೋಂದಣಿ' ಹೆಸರಿನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಭಿಯಾನ ಕೈಗೊಂಡಿತ್ತು. ಈ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಯುವ ಮತದಾರರು ಸೇರಿದಂತೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದವರಿಂದ ಭರಪೂರ ಅರ್ಜಿಗಳು ಹರಿದು ಬಂದಿದೆ.

ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಈ ಅಭಿಯಾನವನ್ನು ಕೈಗೊಳ್ಳಲಾಗಿತ್ತು. ಅಭಿಯಾನಕ್ಕೆ ರಾಜ್ಯದ 30 ಜಿಲ್ಲೆಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ ಒಟ್ಟು 6,45,555 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 4,90,351 ಫಾರಂ-6 ಅರ್ಜಿಗಳಾಗಿವೆ ಎಂದು ಹೇಳಿದೆ.

Minchina Nondani Campaign: EC accepts 6.45 lakh applications

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1,30,466 ಅರ್ಜಿಗಳು ಸ್ವೀಕಾರಗೊಂಡಿವೆ ಎಂದು ಆಯೋಗ ವಿವರ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+