ರಾಷ್ಟ್ರಗೀತೆ ಹಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಗಡ್ಕರಿ
ಪುಣೆ, ಡಿಸೆಂಬರ್ 7: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋ ಶುಗರ್‌ನಿಂದಾಗಿ ವೇದಿಕೆಯಲ್ಲಿಯೇ ಕುಸಿದು ಬಿದ್ದು ಪ್ರಜ್ಞಾಹೀನರಾದ ಘಟನೆ ಶುಕ್ರವಾರ ನಡೆದಿದೆ.
ಮಹಾರಾಷ್ಟ್ರದ ಅಹ್ಮದ್‌ನಗರದ ರಹೂರಿ ಕೃಷಿ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗಡ್ಕರಿ ಭಾಗವಹಿಸಿದ್ದರು.
ಉದ್ಘಾಟನಾ ಸಮಾರಂಭದ ವೇಳೆ ಆರಂಭದಲ್ಲಿ ರಾಷ್ಟ್ರಗೀತೆ ಹಾಡಲಾಗುತ್ತಿತ್ತು. ಆಗ ಗಡ್ಕರಿ ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾಗಿ ಕುಸಿದು ಬಿದ್ದರು.

ಮಹಾರಾಷ್ಟ್ರ ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಮತ್ತು ಭದ್ರತಾ ಸಿಬ್ಬಂದಿ ಕುಸಿದು ಬಿದ್ದ ಗಡ್ಕರಿ ಅವರನ್ನು ಹಿಡಿದುಕೊಂಡರು.
Union Minister Gadkari fainted during a convocation function in Ahmadnagar (Maharashtra). Stable now. pic.twitter.com/xNmgSbKIa5
— snehanshu shekhar (@snehanshus) 7 December 2018
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡರು.
ಕೆಲವೇ ಗಂಟೆಯಲ್ಲಿ ಗಡ್ಕರಿ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Had slight medical condition due to low sugar. I have been attended by doctors and i am doing well now. I thank all of you for all the well wishes.
— Nitin Gadkari (@nitin_gadkari) 7 December 2018
'ಕಡಿಮೆ ಸಕ್ಕರೆ ಅಂಶದ ಕಾರಣದಿಂದ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು. ವೈದ್ಯರು ನನ್ನನ್ನು ನೋಡಿಕೊಂಡಿದ್ದು, ಈಗ ಚೇತರಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು' ಎಂದು ಅವರು ಟ್ವೀಟ್ ಮಾಡಿದ್ದಾರೆ.












Click it and Unblock the Notifications