ಪ್ರಧಾನಿ ಮೋದಿ ಅವರದು ಚಾಣಕ್ಯನ ನೀತಿ: ಅಮಿತ್ ಶಾ
Recommended Video

ಪುಣೆ, ಜುಲೈ 9: ರಾಜಕೀಯ ತಂತ್ರಗಳನ್ನು ಹೆಣೆದು ವಿರೋಧಪಕ್ಷಗಳಿಗೆ ಆಘಾತ ನೀಡುವುದರಲ್ಲಿ ನಿಸ್ಸೀಮರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಬಿಜೆಪಿ ಅಭಿಮಾನಿಗಳು ಚಾಣಕ್ಯ ಎಂದೇ ಕರೆಯುತ್ತಾರೆ.
ಆದರೆ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಣಕ್ಯನಿಗೆ ಹೋಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು ಆರ್ಯ ಚಾಣಕ್ಯನ ನೀತಿಗಳನ್ನು ಹೋಲುತ್ತವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ರಾಮಭಾವು ಮಾಲ್ಗಿ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ, ಈ ಹೋಲಿಕೆ ಮಾಡಿದ್ದಾರೆ.

ರಾಮಭಾವು ಮಾಲ್ಗಿ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ 12ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
'ಪ್ರಸ್ತುತದ ಸನ್ನಿವೇಶದಲ್ಲಿ ಆರ್ಯ ಚಾಣಕ್ಯ: ಜೀವನ ಮತ್ತು ಕೆಲಸ' ಎಂಬ ವಿಚಾರದ ಕುರಿತಾಗಿ ಅಮಿತ್ ಶಾ ಉಪನ್ಯಾಸ ನೀಡಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು ಚಾಣಕ್ಯನ ನೀತಿಗಳನ್ನೇ ಹೋಲುತ್ತವೆ ಎಂದು ವ್ಯಾಖ್ಯಾನಿಸಿದ್ದರು.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಹಾಜರಿದ್ದರು.
ಬಳಿಕ ಬಿಜೆಪಿಯ ಸಂಪರ್ಕ್ ಸೆ ಸಮರ್ಥನ್ ಕಾರ್ಯಕ್ರಮದ ಅಂಗವಾಗಿ ಖ್ಯಾತ ಬರಹಗಾರ ಬಾಬಾಸಾಹೇಬ್ ಪುರಂದರ್ ಅವರನ್ನು ಪುಣೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಮಭಾವು ಮಾಲ್ಗಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗುತ್ತಿರುವ ಉಪನ್ಯಾಸದಲ್ಲಿ 1996ರಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಮಾತನಾಡಿದ್ದರು.
'ನಮ್ಮ ಸಂವಿಧಾನ ಮತ್ತು ರಾಷ್ಟ್ರೀಯ ಜಾತ್ಯತೀತತೆ' ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದ್ದರು.
ಅವರ ಬಳಿಕ ಸುಷ್ಮಾ ಸ್ವರಾಜ್, ರಾಮ್ ಮಾಧವ್, ಇಂದ್ರೇಶ್ ಕುಮಾರ್ ಸೇರಿದಂತೆ ಅನೇಕ ಮುಖಂಡರು ಇಲ್ಲಿ ಉಪನ್ಯಾಸ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications