• search
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಂತರ್ ಮಂತರ್ ನಲ್ಲಿ ಮೋದಿ ವಿರುದ್ಧ ರಾಹುಲ್ ಗುಡುಗು!

|
   ಜಂತರ್ ಮಂತರ್ ನಲ್ಲಿ ಮೋದಿ ವಿರುದ್ಧ ರಾಹುಲ್ ಗುಡುಗು! | Oneindia Kannada

   ನವದೆಹಲಿ, ಆಗಸ್ಟ್ 09: 'ದಲಿತರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಯಾವ ಭಾವನೆ ಇದೆ? ಅವರು ಸಮಾಜದ ದುರ್ಬಲ ವರ್ಗವನ್ನು ಮತ್ತಷ್ಟು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.

   ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ತೆಲಂಗಾಣ ಮೂಲದ ಮಹಾದಿಕಾ ಮೀಸಲು ವಿಕಾಸ ಸಮಿತಿ ಎಂಬ ಸಂಘಟನೆ ಇಂದು(ಆ.09) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

   ಆಗಸ್ಟ್ 9 ರಂದು ದಲಿತ ಸಂಘಟನೆಗಳಿಂದ ಭಾರತ್ ಬಂದ್, ಯಾಕಾಗಿ?

   "ಸಾಫ್ ನಿಯತ್, ಸಹಿ ವಿಕಾಸ್(ಉತ್ತಮ ಉದ್ದೇಶ, ಸರಿಯಾದ ಅಭಿವೃದ್ಧಿ) ಎಂಬುದು 2019 ರ ಚುನಾವಣೆಗೆ ಬಿಜೆಪಿಯ ಘೋಷವಾಕ್ಯ. ಯಾವುದೋ ಒಂದು ಉದ್ದೇಶಕ್ಕಾಗಿ ಅವರು ಕೆಲಸ ಮಾಡುವುದಾದರೆ, ಅವರ ಹೃದಯದಲ್ಲಿ ದಲಿತರ ಬಗ್ಗೆ ಯಾವ ಭಾವನೆ ಇದ್ದಂತಾಯಿತು?" ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

   Rahul Gandhi accuses PM Modi of marginalizing Dalits

   "ತಮ್ಮ ಒಂದು ಪುಸ್ತಕದಲ್ಲಿ ಮೋದಿ ಬರೆದುಕೊಂಡಿದ್ದರು, 'ದಲಿತರು ಮನೆ ಸ್ವಚ್ಛ ಮಾಡಿದರೆ ಖುಷಿಯಾಗುತ್ತದೆ' ಎಂದು. ಎಸ್ ಸಿ ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ನು ಕಾಂಗ್ರೆಸ್(ರಾಜೀವ್ ಗಾಂಧಿ) ನೀಡಿತ್ತು. ಆದರೆ ಇದೀಗ ಆ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗುತ್ತಿದೆ. ಈ ಕಾಯ್ದೆ ತಿದ್ದುಪಡಿಯಾಗಲು ಕಾಂಗ್ರೆಸ್ ಬಿಡುವುದಿಲ್ಲ" ಎಂದು ರಾಹುಲ್ ಗಾಂಧಿ ಗುಡುಗಿದರು.

   ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಿಪಿಐ(ಎಂ) ಮುಖಂಡ ಸೀತಾರಾಮ್ ಯಚೂರಿಯವರೂ ಇದ್ದರು.

   ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಸಾಮಾಜಿಕವಾಗಿ ಹಿಂದುಳಿದಿದ್ದು, ಅವರ ಮೇಲೆ ನಿರಂತರ ಹಿಂಸೆ ನಡೆಯುತ್ತಿದೆ ಎಂಬುದನ್ನು ಮನಗಂಡಿದ್ದ 1989ರ ಸರ್ಕಾರ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ 1989 ಅನ್ನು ಜಾರಿಗೆ ತಂದಿತ್ತು. ಇದರನ್ವಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಯಾವುದೇ ವ್ಯಕ್ತಿ ತಮ್ಮ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ದೂರು ನೀಡಿದ್ದೇ ಆದಲ್ಲಿ, ಆರೋಪಿಯನ್ನು ಯಾವುದೇ ವಿಚಾರಣೆಯಿಲ್ಲದೆ ಬಂಧಿಸಲಾಗುತ್ತಿತ್ತು ಮತ್ತು ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿತ್ತು.

   ಆದರೆ ಇತ್ತೀಚಿನ ದಿನಗಳಲ್ಲಿ ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಅರಿತ ಸುಪ್ರೀಂ ಕೋರ್ಟ್ ಈ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅಂತೆಯೇ ಮುಂಗಾರು ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗಿದ್ದು ಅದಕ್ಕಾಗಿ ವಿರೋಧ ವ್ಯಕ್ತವಾಗುತ್ತಿದೆ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   ಇನ್ನಷ್ಟು ನವದೆಹಲಿ ಸುದ್ದಿಗಳುView All

   English summary
   Questioning Prime Minister Narendra Modi's intentions towards Dalits, Congress president Rahul Gandhi on Thursday claimed that the former wants to marginalise the weaker sections of the society.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more