ಕೊವಿಶೀಲ್ಡ್ ಲಸಿಕೆ ಪಡೆದ ಸೆರಮ್ ಇನ್ಸ್ ಟಿಟ್ಯೂಟ್ ಸಿಇಓ ಪೂನಾವಲ್ಲಾ

ಪುಣೆ, ಜನವರಿ.16: ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನಿಕಾ ಸಂಸ್ಥೆಗಳು ಸಂಶೋಧಿಸಿದ ಹಾಗೂ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದನೆ ಆಗಿರುವ ಕೊವಿಶೀಲ್ಡ್ ಲಸಿಕೆ ಬಗ್ಗೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆಯ ಸಿಇಓ ಅದರ್ ಪೂನಾವಲ್ಲಾ ಹೆಜ್ಜೆ ಇಟ್ಟಿದ್ದಾರೆ.

Recommended Video

      ಕೋವಿಶೀಲ್ಡ್ ಲಸಿಕೆ ಪಡೆದ ಸೇರಮ್‌ ಇನ್ಸ್‌ಟಿಟ್ಯೂಟ್‌ CEO ಅದರ್‌ Poonawala | Oneindia Kannada

      ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಇನ್ನೊಂದು ಕಡೆಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿರುವ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಉತ್ಪಾದಿಸಿದ ಕೊವಿಶೀಲ್ಡ್ ಲಸಿಕೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವುದಕ್ಕಾಗಿ ಸ್ವತಃ ಕಂಪನಿಯ ಸಿಇಓ ಅದರ್ ಪೂನಾವಲ್ಲಾ ಲಸಿಕೆಯನ್ನು ಹಾಕಿಸಿಕೊಂಡರು.

      ಸ್ವತಃ ಅದರ್ ಪೂನಾವಲ್ಲಾ ಅವರು ಕೊವಿಶೀಲ್ಡ್ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಸಂಸ್ಥೆಯಲ್ಲಿ ಉತ್ಪಾದಿಸಿರುವ ಲಸಿಕೆ ಕುರಿತು ಭರವಸೆ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಇನ್ನು, ಲಸಿಕೆ ಹಾಕಿಸಿಕೊಂಡ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

      Serum Institute Of India CEO Adar Poonawalla Receives A Shot Of COVISHIELD Vaccine

      10 ಕೋಟಿ ಜನರಿಗೆ ಕೊವಿಶೀಲ್ಡ್ ಲಸಿಕೆ:

      ದೇಶದ 13 ಕಡೆಗಳಿಗೆ 54.72 ಲಕ್ಷ ಕೊವಿಶೀಲ್ಡ್ ಲಸಿಕೆಯನ್ನು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಕಳುಹಿಸಿ ಕೊಟ್ಟಿದೆ. ಮೊದಲ ಹಂತದಲ್ಲಿ 10 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅದರ್ ಪೂನಾವಲ್ಲಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

      ಒಂದು ಡೋಸ್ ಕೊವಿಶೀಲ್ಡ್ ಲಸಿಕೆ ಬೆಲೆ ಎಷ್ಟು?:

      ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಉತ್ಪಾಸಿರುತ್ತಿರುವ ಒಂದು ಡೋಸ್ ಕೊವಿಶೀಲ್ಡ್ ಲಸಿಕೆಗೆ ಕೇಂದ್ರ ಸರ್ಕಾರ 200 ರೂಪಾಯಿ ನೀಡಬೇಕಿದೆ. 10 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ನೀಡುವುದಾಗಿ ಸಂಸ್ಥೆ ಈಗಾಗಲೇ ಸ್ಪಷ್ಟಪಡಿಸಿದೆ. ಇದನ್ನು ಹೊರತುಪಡಿಸಿದಂತೆ ಖಾಸಗಿ ಮಾರುಕಟ್ಟೆಯಲ್ಲಿ ಒಂದು ಡೋಸ್ ಲಸಿಕೆ ಪಡೆಯುವುದಕ್ಕೆ 1,000 ರೂಪಾಯಿ ನೀಡಬೇಕಾಗುತ್ತದೆ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಓ ಅದರ್ ಪೂನಾವಲ್ಲಾ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+