ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು; ಮನೆ ಗೋಡೆ ಕುಸಿದು ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

|
Google Oneindia Kannada News

ರಾಯಚೂರು, ಅ.04: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಒಂದು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಪರಮೇಶ್ (45), ಜಯಮ್ಮ (40) ಮತ್ತು ಭರತ್ (4) ಎಂದು ಗುರುತಿಸಲಾಗಿದೆ.

ಕೊಪ್ಪಳ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರಲ್ಲಿ ಮೂವರ ಮೃತದೇಹ ಪತ್ತೆಕೊಪ್ಪಳ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರಲ್ಲಿ ಮೂವರ ಮೃತದೇಹ ಪತ್ತೆ

ಮಾನವಿ ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗಿದ್ದು, ಇದರ ಪರಿಣಾಮವಾಗಿ ಮನೆಗಳ ಗೋಡೆ ದುರ್ಬಲಗೊಂಡು ಕುಸಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ. "ಕಟ್ಟಡ ಕುಸಿದು ಬಿದ್ದಾಗ ಸಂತ್ರಸ್ತರು ನಿದ್ರೆ ಮಾಡುತ್ತದ್ದರು. ನೆರೆಹೊರೆಯವರು ಈ ಬಗ್ಗೆ ನಮಗೆ ಮಾಹಿತಿ ನೀಡಿದರು. ಸ್ಥಳೀಯರ ಸಹಾಯದಿಂದ ನಾವು ಮೃತರ ಅವಶೇಷಗಳನ್ನು ಹುಡುಕಿದೆವು, ಆದರೆ, ಅವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದರು" ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

3 members of family, including a child, died after house collapsed in Raichur

ಇತ್ತಿಚೆಗೆ ಕೊಪ್ಪಳ ಜಿಲ್ಲೆಯಲ್ಲಿಯೂ ಸುರಿದ ಭಾರಿ ಮಳೆಗೆ ಸೇತುವೆ ದಾಟುತ್ತಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ ನಂತರ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಮಹಿಳಾ ಕೂಲಿ ಕಾರ್ಮಿಕರು ಕೆಲಸದಿಂದ ಹಿಂತಿರುಗಿ ಯಲ್ಲಬುರಗಿಯ ಸಂಕನೂರ ಗ್ರಾಮದ ಮುಳುಗು ಸೇತುವೆಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದರು.

ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದ್ದವು. ಗಿರಿಜಾ ಮಾಲಿ ಪಾಟೀಲ್(40), ಭುವನೇಶ್ವರಿ ಪೊಲೀಸ್ ಪಾಟೀಲ್(40), ಪವಿತ್ರಾ ಪೊಲೀಸ್ ಪಾಟೀಲ್(45), ವೀಣಾ ಮಾಲಿ ಪಾಟೀಲ್(19) ಎಂಬ ನಾಲ್ವರು ಕೊಚ್ಚಿಕೊಂಡು ಹೋಗಿದ್ದರು.

ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಕೆಲವು ಭಾಗಗಳಲ್ಲಿ ಅಕ್ಟೋಬರ್‌ನಲ್ಲಿ ಸ್ವಲ್ಪ ಮಳೆ ಬೀಳಬಹುದು.

3 members of family, including a child, died after house collapsed in Raichur

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ, ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆಯೊಂದಿಗೆ ಸಾಧಾರಣದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯು (IMD) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.

English summary
Three members of a family including a child, died after their house wall collapsed due to heavy rains in Raichur. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X