Mantralaya Rain: ಮಂತ್ರಾಲಯದಲ್ಲಿ 353ನೇ ಆರಾಧನಾ ಮಹೋತ್ಸವ: ರಾತ್ರಿ ಸುರಿದ ಮಳೆಗೆ ನಿದ್ದೆಗೆಟ್ಟ ಭಕ್ತರು
ರಾಯಚೂರು ಆಗಸ್ಟ್ 20: ಶ್ರೀ ರಾಘವೇಂದ್ರ ಸ್ವಾಮಿ ಅಥವಾ ರಾಯರು ಭಗವಾನ್ ನಾರಾಯಣನ ಶ್ರೇಷ್ಠ ಭಕ್ತರಲ್ಲಿ ಒಬ್ಬರು. ಈಗ ಮಂತ್ರಾಲಯದಲ್ಲಿ 353ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಇದಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಮಂತ್ರಾಲಯಕ್ಕೆ ಭಕ್ತರು ಆಗಮಿಸಿದ್ದಾರೆ. ಆದರೆ ಕಳೆದ ದಿನ ತಡ ರಾತ್ರಿ ಸುರಿದ ಭಾರೀ ಮಳೆಗೆ ಜನ ಪರದಾಡಿದ್ದಾರೆ.
ಏಕಾಏಕಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ಮಲಗಲು ಜಾಗವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಭಕ್ತರ ಬಳಿ ಆಗಮಿಸಿದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಪರ್ಯಾಯ ವ್ಯವಸ್ಥೆ ಮಾಡಿಸಿದ್ದಾರೆ. ಮಠದ ಪ್ರಕಾರ, ಪ್ರವಚನ ಮಂಟಪದಲ್ಲಿ ಭಕ್ತರಿಗೆ ಮಲಗಲು ಮಠದ ಸಿಬ್ಬಂದಿ ಅನುವು ಮಾಡಿಕೊಟ್ಟಿದ್ದಾರೆ. ಇಂದು ರಾಯರ ಪೂರ್ವಾರಾಧನೆ ಹಿನ್ನಲೆ ಹೆಚ್ಚು ಸಂಖ್ಯೆಯಲ್ಲಿ ರಾತ್ರಿಯೇ ಆಗಮಿಸಿದ ಭಕ್ತರು ಮಠದ ಆವರಣದಲ್ಲಿ ಮಲಗಿದ್ದರು. ಆದರೆ 2 ಗಂಟೆಗೆ ಸುರಿದ ಮಳೆಯಿಂದಾಗಿ ಭಕ್ತರಿಗೆ ಮಲಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರಿಗೆ ಮಲಗಲು ಪರ್ಯಾಯ ವ್ಯವಸ್ಥೆ ಮಾಡಿಕೊಡಲಾಯಿತು.

ಗುರು ರಾಘವೇಮದ್ರ ಸ್ವಾಮಿಗಳು ಸಶರೀರರಾಗಿ ವೃಂದಾವಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಇಂದು ಮಂತ್ರಾಲಯದಲ್ಲಿ ಆಚರಣೆ ಸೇರಿದಂತೆ ದೇಶದ ಎಲ್ಲಾ ರಾಯರ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ.
ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದೆಲ್ಲೆಡೆ ಮಳೆಯಾಗಲಿದೆ. ಈ ಪೈಕಿ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿ ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಗುರುರಾಯರ 353ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಭಾನುವಾರ ರಾತ್ರಿ ವಿದ್ಯುಕ್ತ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಪೀಠಾಪತಿ ಶ್ರೀ ಸುಬುಧೇಂದ್ರ ತೀರ್ಥರು ಗೋವು, ಅಶ್ವ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ರಾತ್ರೋತ್ಸವ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿ ನಂತರ ಯೋಗಿಂದ್ರ ಸಭಾ ಮಂಟಪದಲ್ಲಿ ಶ್ರೀಗಳು ಭಕ್ತರಿಗಾಗಿ ಆಶೀರ್ವಚನ ನೀಡಿದರು.
ಕಲಿಯುಗದ ಕಾಮದೇನು, ಕಲ್ಪವೃಕ್ಷರಾದ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸದ ನಿಮಿತ್ತ ಸಪ್ತರಾತ್ರೋತ್ಸವ ಆರಂಭವಾಗಿದೆ. ಈಗಾಗಲೇ ಗೋಪೂಜೆ, ಅಶ್ವಪೂಜೆ, ಧ್ವಜವಂದನೆ, ಧ್ವಜಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ದೇಶ ಮತ್ತು ವಿದೇಶಗಳಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠಗಳು, ಸನ್ನಿಧಾನಗಳಲ್ಲಿ ವೈಭವದಿಂದ ಆರಾಧನಾ ಮಹೋತ್ಸವ ಜರುಗಲಿದೆ ಎಂದರು.












Click it and Unblock the Notifications