ಕರೆಂಟ್ ಬಿಲ್ ಕೇಳಲು ಬಂದ ಜೆಸ್ಕಾಂ ಸಿಬ್ಬಂದಿಗೆ ಗೃಹಿಣಿ ಕೊಟ್ಟ ಉತ್ತರ ಹೇಗಿತ್ತು?

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್‌ ಪಕ್ಷ ಶೀಘ್ರದಲ್ಲೇ ಬಹುಮತದ ಸರ್ಕಾರವನ್ನು ರಚಿಸಲಿದೆ. ಸದ್ಯ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ತಲ್ಲೀನವಾಗಿದೆ.

ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯದ ಮತದಾರರಿಗೆ ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಇದಕ್ಕಾಗಿ ಮನೆಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿದ್ದರು. ಇದೂ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಿದೆ.

A Woman Angry On GESCOM

ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ಕೂಡ ಒಂದಾಗಿದೆ. ಇದು ಈಗ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ವಿದ್ಯುತ್ ಬಿಲ್ ನೀಡಲು ಹೋಗುತ್ತಿರುವ ವಿದ್ಯುತ್ ಕಂಪನಿ ಸಿಬ್ಬಂದಿಗಳಿಗೆ ಜನರು ಉಗಿಯುತ್ತಿದ್ದಾರೆ. ಕರೆಂಟ್ ಬಿಲ್ ಕಟ್ಟಬೇಡಿ ಅಂತಾ ಕಾಂಗ್ರೆಸ್ ಹೇಳಿತ್ತು, ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಹೇಳುತ್ತಿದ್ದಾರೆ.

ಅಂತಹದೇ ಒಂದು ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷ ನೀಡಿರುವ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಹಿನ್ನೆಲೆ, ಕರೆಂಟ್ ಬಿಲ್ ಕೇಳಲು ಬಂದ ಜೆಸ್ಕಾಂ ಸಿಬ್ಬಂದಿಗೆ ಗೃಹಿಣಿಯೊಬ್ಬಳು ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾಳೆ.

ಈ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ನಡೆದಿದ್ದು, ಶಾಸಕರಾಗಿ ಆಯ್ಕೆಯಾಗಿರುವ ಬಸನಗೌಡ ತುರ್ವಿಹಾಳ ಅವರು ಚುನಾವಣೆಗೂ ಮುನ್ನ, ಗ್ಯಾರಂಟಿ ಕಾರ್ಡ್ ಕೊಟ್ಟು ಮುಂದಿನ ತಿಂಗಳಿನಿಂದ ಕರೆಂಟ್ ಬಿಲ್ ಕಟ್ಟಬೇಡಿ ಅಂತಾ ಹೇಳಿದ್ದಾರೆ. ಗಲ್ಲೋವರೆಗೂ ಒಂದು, ಗೆದ್ದ ಮೇಲೆ ಇನ್ನೊಂದಾ? ನಾವು ಕರೆಂಟ್ ಬಿಲ್ಲ ಕಟ್ಟುವುದಿಲ್ಲ ಎಂದು ಗೃಹಿಣಿಯೊಬ್ಬಳು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾಳೆ.

A Woman Angry On GESCOM

ಕಾಂಗ್ರೆಸ್ ಸರ್ಕಾರ ಬಂದಿದೆ, ಬಸ್‌ನಲ್ಲಿ ಫ್ರೀ ಆಗಿ ಓಡಾಡಬೇಕು. ಅವರತ್ರನೇ ಕಟ್ಟಿಸಿಕೊ ಹೋಗಿ ಎಂದು ಜೆಸ್ಕಾಂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಮಹಿಳೆಯ ಕೋಪಕ್ಕೆ ಹೆದರಿ ಜೆಸ್ಕಾಂ ಸಿಬ್ಬಂದಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು

ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ರಾಜ್ಯದ ಮತದಾರರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅಧಿಕಾರಕ್ಕೆ ಬಂದರೆ, ಮೊದಲ ಕ್ಯಾಬಿನೆಟ್‌ನಲ್ಲೇ ಐದೂ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿತ್ತು. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸರ್ಕಾರ ರಚಿಸಿದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಕಾಂಗ್ರೆಸ್ ಮೇಲಿದೆ.

* ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ (ಪ್ರತಿ ತಿಂಗಳು)
* ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ (ಪ್ರತಿ ತಿಂಗಳು)
* ಪ್ರತಿ ಮನೆಯ ಯಜಮಾನಿಗೆ 2000 ರೂ. (ಪ್ರತಿ ತಿಂಗಳು)
* ನಿರುದ್ಯೋಗಿ ಪದವೀಧರರಿಗೆ 3000 ರೂ., ಡಿಪ್ಲೋಮಾ ಪದವೀಧರರಿಗೆ 1500 ರೂ. (ಪ್ರತಿ ತಿಂಗಳು)
* ಪ್ರತಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+