ರಾಜ್ಯದಲ್ಲಿ ಬರ, ಸಂಬಳದಲ್ಲಿ ಶಾಲಾ ಮಕ್ಕಳಿಗೆ ಬೈಸಿಕಲ್ ಕೊಡಿಸಿದ ಕಾರ್ಮಿಕ! ಜನನಾಯಕರು ಇದನ್ನು ಮಾಡುವುದು ಯಾವಾಗ?
ರಾಯಚೂರು ಮಾರ್ಚ್ 06: ಕೂಲಿ ಕಾರ್ಮಿಕನೊಬ್ಬ ತನ್ನ ಸ್ವಂತ ದುಡಿಮೆಯ ಹಣದಿಂದ ಶಾಲಾ ಮಕ್ಕಳಿಗೆ ಬೈಸಿಕಲ್ ಕೊಡಿಸಿದ ಘಟನೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ ನಡೆದಿದೆ. ಆಂಜನೇಯ ಎಂಬುವವರು ತಮ್ಮ ದುಡಿಮೆಯಿಂದ ಬಂದ ಹಣದಲ್ಲಿ ಗ್ರಾಮದ 8ನೇ ತರಗತಿಯ 11 ವಿದ್ಯಾರ್ಥಿಗಳಿಗೆ ಹೀರೊ ಸೈಕಲ್‌ಗಳನ್ನು ಕೊಡಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇದಕ್ಕಾಗಿ ಅವರು ₹60 ಸಾವಿರ ಖರ್ಚು ಮಾಡಿದ್ದಾರೆ.ಮಲ್ಕಂದಿನ್ನಿ ಗ್ರಾಮದಲ್ಲಿ ಪ್ರೌಢಶಾಲೆ ಇಲ್ಲ. ಪ್ರೌಢ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು 5 ಕಿ.ಮೀ. ದೂರದ ಹೇಮನೂರಿಗೆ ನಡೆದುಕೊಂಡು ಹೋಗುತ್ತಾರೆ. ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕ ಆಂಜನೇಯ, ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಗಮನಿಸಿದ್ದಾರೆ. 11 ಸೈಕಲ್ ಖರೀದಿಸಿ ಶನಿವಾರ ಶಾಲೆಗೆ ತೆರಳಿ ಮುಖ್ಯಶಿಕ್ಷಕ ಬಸವರಾಜ ಮತ್ತು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಾರೆ.

'ಬಸ್ ವ್ಯವಸ್ಥೆ ಇಲ್ಲದ ಕಾರಣ ನಡೆದುಕೊಂಡು ಹೋಗಲು ಸಾಧ್ಯವಾಗದೆ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ನಮ್ಮ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ನನ್ನ ಈ ಅಲ್ಪ ಸೇವೆಯಿಂದ ಅವರ ಭವಿಷ್ಯ ಉಜ್ವಲವಾಗಲಿ' ಎಂದು ಆಂಜನೇಯ ತಿಳಿಸಿದರು.
ದೇವದುರ್ಗ ತಾಲ್ಲೂಕಿನಲ್ಲಿ 186 ಕಂದಾಯ ಗ್ರಾಮಗಳು, 50ಕ್ಕೂ ಹೆಚ್ಚು ತಾಂಡಾಗಳು ಹಾಗೂ 30 ದೊಡ್ಡಿಗಳಿವೆ. ಅವುಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಗ್ರಾಮಗಳಿಗೆ ಇಂದಿಗೂ ಬಸ್‌ನ ವ್ಯವಸ್ಥೆ ಇಲ್ಲ. ಇದರಿಂದ ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ.
ಪ್ರೌಢಶಾಲೆಗೆ ನಡೆದು ಹೋಗಲಾಗದೆ ಪ್ರತಿವರ್ಷ ೧೫ ರಿಂದ ೨೦ ವಿದ್ಯಾರ್ಥಿನಿಯರು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದಾರೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೈಕಲ್ ನೀಡಿದ್ದೇನೆ ಎಂದು ಕೂಲಿ ಕಾರ್ಮಿಕ ಆ ಂಜನೇಯ ಮಲ್ಕಂದಿನ್ನಿ ಹೇಳಿದರು.
ಗ್ರಾಮೀಣ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ನಡೆದು ಶಾಲೆಗಳಿಗೆ ತೆರಳುತ್ತಾರೆ. ಸರ್ಕಾರ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮತ್ತೆ ಆರಂಭಿಸಬೇಕು ಎಂದು ಸೈಕಲ್ ಪಡೆದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಯೋಜನೆ ಹಿನ್ನೆಲೆ
2006-07ನೇ ಸಾಲಿನಲ್ಲಿ ಅಂದಿನ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಸೈಕಲ್ ವಿತರಿಸುವ ಯೋಜನೆ ಪ್ರಾರಂಭಿಸಿತು. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲು ಮುಂದಾಯಿತು. ಈ ಯೋಜನೆ ಹೆಚ್ಚು ಪ್ರಚಾರ ಪಡೆದ ಹಿನ್ನೆಲೆಯಲ್ಲಿ ಪಾಲಕರು ಬಾಲಕರಿಗೂ ವಿಸ್ತರಿಸುವಂತೆ ಬೇಡಿಕೆ ಮುಂದಿಟ್ಟರು. ಆನಂತರದಲ್ಲಿ ಸರಕಾರ ಪ್ರೌಢಶಾಲೆಗೆ ಸೇರುವ ಬಾಲಕ ಮತ್ತು ಬಾಲಕಿಯರಿಗೆ ಸೈಕಲ್ ವಿತರಿಸಲು ಮುಂದಾಯಿತು. ಮಹಾನಗರ ಪಾಲಿಕೆಗೆ ಸೇರಿದ ಹಾಗೂ ಬಸ್‌ಗಳ ಸಂಖ್ಯೆ ಹೆಚ್ಚಿರುವ ನಗರಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಜನೆ ಪ್ರಯೋಜನ ದೊರೆಯುವುದಿಲ್ಲ. 2015-16ನೇ ಶೈಕ್ಷಣಿಕ ವರ್ಷದಲ್ಲಿ ಶೂ ಮತ್ತು ಸಾಕ್ಸ್ ವಿತರಿಸುವ ಯೋಜನೆ ಆರಂಭವಾಗಿತ್ತು. ಕೊರೊನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆಯದೇ ಇದ್ದುದರಿಂದ ಈ ಯೋಜನೆಯನ್ನು ಕೂಡ ಮೊಟಕುಗೊಳಿಸಿತು.
ಸರಕಾರಿ ಶಾಲಾ ಮಕ್ಕಳಲ್ಲಿನ ಪೌಷ್ಟಿಕಾಂಶ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಜಾರಿಗೆ ತಂದ ವಾರದಲ್ಲಿ 2 ದಿನ ಮೊಟ್ಟೆ ಯೋಜನೆಯನ್ನು 5 ದಿನಕ್ಕೆ ವಿಸ್ತರಣೆ ಮಾಡುವ ಉದ್ದೇಶದಿಂದ ಅನುದಾನ ಕೋರಿ ಶಿಕ್ಷಣ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳಿಗೆ ತೆರಳಲು ಸೈಕಲ್ ಹೆಚ್ಚು ಅನುಕೂಲಕರ. ಪ್ರೌಢಶಾಲೆ ಐದಾರು ಕಿ. ಮೀ. ದೂರವಿದ್ದರೆ ಮಕ್ಕಳು ಶಾಲೆಗೆ ಹೋಗುವುದಿಲ್ಲ. ಹಾಗಾಗಿ ಸರಕಾರ ನಮಗೆ ಸೈಕಲ್ ನೀಡಬೇಕು ಎಂದು ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿ ಪ್ರಸಾದ್ ಬಾಬು ಆಗ್ರಹಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್‌ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications