ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು : ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?

|
Google Oneindia Kannada News

ರಾಯಚೂರು, ಅಕ್ಟೋಬರ್ 17 : ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದೆ. 1720 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯವನ್ನು ಶಾಖೋತ್ಪನ್ನ ಕೇಂದ್ರ ಹೊಂದಿದೆ.

ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್‌ಟಿಪಿಎಸ್‌)ದಲ್ಲಿ 2924 ಮೆಟ್ರಿಕ್ ಟನ್ ಕಲ್ಲಿದ್ದಲು ಮಾತ್ರ ಇದೆ. ಪ್ರತಿ ದಿನಕ್ಕೆ 23000 ಮೆಟ್ರಿಕ್ ಟನ್ ಕಲ್ಲಿದ್ದಲು ಕೇಂದ್ರಕ್ಕೆ ಅಗತ್ಯವಿದೆ. ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್‌ ಟು ಡಿಸೆಂಬರ್ ಹೆಚ್ಚುವರಿ ವಿದ್ಯುತ್ ಬಿಲ್ ಏಕೆ ಕಟ್ಟಬೇಕು?ಅಕ್ಟೋಬರ್‌ ಟು ಡಿಸೆಂಬರ್ ಹೆಚ್ಚುವರಿ ವಿದ್ಯುತ್ ಬಿಲ್ ಏಕೆ ಕಟ್ಟಬೇಕು?

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಈ ಕುರಿತು ಮಾತನಾಡಿದ್ದು, 'ಕಲ್ಲಿದ್ದಲು ಕೊರತೆಯಿಂದಾಗಿ ರಾಯಚೂರಿನ ಶಾಖೋತ್ಪನ್ನ ಕೇಂದ್ರದ ಪರಿಸ್ಥಿತಿ ಗಂಭೀರವಾಗಿ' ಎಂದು ಹೇಳಿದ್ದಾರೆ.

ಬೆಂಗಳೂರು-ಮೈಸೂರು ಮೆಮು ರೈಲು ಸಂಚಾರಕ್ಕಿದ್ದ ಅಡೆತಡೆ ನಿವಾರಣೆಬೆಂಗಳೂರು-ಮೈಸೂರು ಮೆಮು ರೈಲು ಸಂಚಾರಕ್ಕಿದ್ದ ಅಡೆತಡೆ ನಿವಾರಣೆ

ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಲ್ಲಿದ್ದಲು ಪೂರೈಕೆ ಮಾಡಬೇಕು ಎಂದು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪಿಯೂಷ್ ಘೋಯೆಲ್ ಅವರಿಗೆ ಪತ್ರ ಬರೆದಿದ್ದಾರೆ. ಸಿಐಎಲ್ ಅಗತ್ಯವಿರುವಷ್ಟು ಕಲ್ಲಿದ್ದಲು ಸರಬರಾಜು ಮಾಡಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.

ಕುಮಾರಸ್ವಾಮಿ ಪತ್ರದಲ್ಲೇನಿದೆ?

ಕುಮಾರಸ್ವಾಮಿ ಪತ್ರದಲ್ಲೇನಿದೆ?

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಕಲ್ಲಿದ್ದಲು ಸಚಿವ ಪಿಯೂಷ್ ಗೊಯೇಲ್ ಅವರಿಗೆ ಪತ್ರ ಬರೆದಿದ್ದಾರೆ. ಶಾಖೋತ್ಪನ್ನ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ ಇದೆ. ಸಿಐಎಲ್ ನಮಗೆ ಅಗತ್ಯ ಇರುವುದಕ್ಕಿಂತ 6 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಕಡಿಮೆ ಸರಬರಾಜು ಮಾಡಿದೆ. ಮಹಾನದಿ ಕೋಲ್‌ ಫೀಲ್ಡ್ ಲಿ.ನಿಂದ ಕಲ್ಲಿದ್ದಲು ಸರಬರಾಜು ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಬೇಡಿಕೆ ಏನು?

ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಎಷ್ಟು ದಾಸ್ತಾನು ಇದೆ?

ಎಷ್ಟು ದಾಸ್ತಾನು ಇದೆ?

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್‌ಟಿಪಿಎಸ್‌)ನಲ್ಲಿ 2924 ಮೆಟ್ರಿಕ್ ಟನ್ ಕಲ್ಲಿದ್ದಲು ದಾಸ್ತಾನು ಇದೆ. ಪ್ರತಿ ದಿನ ಕೇಂದ್ರಕ್ಕೆ 23000 ಮೆಟ್ರಿಕ್ ಟನ್ ಕಲ್ಲಿದ್ದಲಿನ ಅಗತ್ಯವಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಹ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಪತ್ರ ಬರೆದಿದ್ದಾರೆ.

ಲೋಡ್ ಶೆಡ್ಡಿಂಗ್ ಇಲ್ಲ

ಲೋಡ್ ಶೆಡ್ಡಿಂಗ್ ಇಲ್ಲ

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಕಲ್ಲಿದ್ದಲು ಪೂರೈಕೆಯಿಂದಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡರೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

English summary
Raichur Thermal Power Station (RTPS) facing acute coal shortage. Karnataka Chief Minister H.D.Kumaraswamy has sought the Centre to ensure adequate coal supply to the state. RTPS has capacity of producing 1,720 MW power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X