ಕಾಂಗ್ರೆಸ್‌ ಅಧಿಕಾರಕ್ಕೆ: ರಾಯಚೂರು ಏಮ್ಸ್ ಹೋರಾಟ ಸಮಿತಿಯಲ್ಲಿ ಹೊಸ ಭರವಸೆ

ರಾಯಚೂರು, ಮೇ 26: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಆರಂಭಿಸಿರುವ ನಿರಂತರ ಧರಣಿಯು 378 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್‌ ಸರ್ಕಾರ ಏಮ್ಸ್‌ ಬೇಡಿಕೆಗೆ ಸ್ಪಂದಿಸಬಹುದು ಎನ್ನುವುದು ಜನರ ನಿರೀಕ್ಷೆ.

ಈ ಮೊದಲು ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಜಿಲ್ಲೆಯ ಕಾಂಗ್ರೆಸ್‌ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರು ಏಮ್ಸ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಏಮ್ಸ್‌ ಬೇಡಿಕೆಗೆ ಸ್ಪಂದಿಸುವಂತೆ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದರು.

Agitation For AIIMS

ಈಗ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸನಗೌಡ ತುರ್ವಿಹಾಳ ಅವರು ಕೂಡಾ ಏಮ್ಸ್‌ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಯಚೂರಿಗೆ ಭೇಡಿ ನೀಡಿದಾಗ ಹೋರಾಟದ ಸ್ಥಳಕ್ಕೆ ಬಂದು ಮನವಿ ಪಡೆದಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು.

ರಾಯಚೂರಿನಲ್ಲಿ ಏಮ್ಸ್‌ ಮಾದರಿ ಸ್ಥಾಪಿಸಲಾಗುವುದು ಎಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಿಸಿರುವುದನ್ನು ಜನರು ಒಪ್ಪಿಕೊಂಡಿಲ್ಲ. ಪೂರ್ಣ ಪ್ರಮಾಣದಲ್ಲಿ ಏಮ್ಸ್‌ ಸ್ಥಾಪಿಸಬೇಕು ಎನ್ನುವ ಹೋರಾಟ ಮುಂದುವರಿಸಿದ್ದು, ಈ ಹೋರಾಟವನ್ನು ಪಕ್ಷಾತೀತವಾಗಿ ಎಲ್ಲ ಶಾಸಕರು ಬೆಂಬಲಿಸುತ್ತಾರೆ ಎನ್ನುವ ಆಶಾಭಾವ ಈಗ ಹೆಚ್ಚಾಗಿದೆ.

ವಿರೋಧ ಪಕ್ಷದ ಭಾಗವಾದ ಜಿಲ್ಲೆಯ ಬಿಜೆಪಿ ಶಾಸಕರು, ಈ ಮೊದಲೇ ಬೆಂಬಲ ನೀಡಿರುವ ಹಾಲಿ ಶಾಸಕರು ಹಾಗೂ ಏಮ್ಸ್‌ ಬೇಡಿಕೆ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿಕೊಂಡ ಜೆಡಿಎಸ್‌ ಒಟ್ಟಾಗಿ ಸ್ಪಂದಿಸುತ್ತಾರೆ ಎನ್ನುವುದು ಜನರಲ್ಲಿ ವಿಶ್ವಾಸ ಮೂಡಿದೆ.

Agitation For AIIMS

'ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಏಮ್ಸ್‌ ಸ್ಥಾಪಿಸುವುದಕ್ಕೆ ಸೂಕ್ತ ಸ್ಥಳದ ಪ್ರಸ್ತಾವನೆ ರಾಜ್ಯ ಸರ್ಕಾರದಿಂದ ಹೋಗಬೇಕಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಧಾರವಾಡ ಜಿಲ್ಲೆ ಸೂಚಿತವಾಗಿದ್ದರೂ ಏಮ್ಸ್‌ ಘೋಷಣೆಯಾಗಿಲ್ಲ. ಕಾಂಗ್ರೆಸ್‌ ಸರ್ಕಾರವು ರಾಯಚೂರಿನಲ್ಲಿ ನಡೆದ ಏಮ್ಸ್‌ ಹೋರಾಟಕ್ಕೆ ಕೂಡಲೇ ಸ್ಪಂದಿಸಿ, ಕೇಂದ್ರಕ್ಕೆ ರಾಯಚೂರು ಜಿಲ್ಲೆಯ ಹೆಸರೊಂದನ್ನೆ ಪ್ರಸ್ತಾವನೆಯಲ್ಲಿ ಸೇರಿಸಿ ಕಳುಹಿಸಬೇಕು. ಅಗತ್ಯಬಿದ್ದರೆ ಏಮ್ಸ್‌ ಮಾನದಂಡಗಳಿಗೆ ಅನುಗುಣವಾಗಿ ರಾಯಚೂರನ್ನು ಅಭಿವೃದ್ಧಿಗೊಳಿಸಬೇಕು' ಎನ್ನುವುದು ಹೋರಾಟಗಾರರ ಬೇಡಿಕೆಯಾಗಿದೆ.

'ಏಮ್ಸ್‌ ಹೋರಾಟ ಸಮಿತಿಯ ನಿಯೋಗದಿಂದ ಚುನಾವಣೆ ಪೂರ್ವದಲ್ಲಿಯೇ ಅಂದು ವಿರೋಧ ಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾಗಿದ್ದ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಲಾಗಿತ್ತು. ಜೆಡಿಎಸ್‌, ಬಿಜೆಪಿ ಮುಖಂಡರನ್ನು ಭೇಟಿ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಬೇಡಿಕೆ ಈಡೇರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೋರಾಟದ ಸ್ಥಳಕ್ಕೆ ಆಗಮಿಸಿ ಘೋಷಿಸಿದ್ದರು' ಎಂದು ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ ತಿಳಿಸಿದ್ದಾರೆ.

ಪೂರ್ಣ ಸಚಿವ ಸಂಪುಟ ರಚನೆಯಾದ ಬಳಿಕ ಜಿಲ್ಲೆಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರು ಹಾಗೂ ಮುಖಂಡರ ಸಮೇತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಏಮ್ಸ್‌ ಬಗ್ಗೆ ಗಮನ ಸೆಳೆಯಲಾಗುವುದು. ಕಾಂಗ್ರೆಸ್‌ ಸರ್ಕಾರದಿಂದ ಬೇಡಿಕೆ ಈಡೇರುತ್ತದೆ ಎನ್ನುವ ಸಂಪೂರ್ಣ ಭರವಸೆ ಇದೆ ಎಂದು ಡಾ.ಬಸವರಾಜ ಕಳಸ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+