ಲಿಂಗಸುಗೂರು ಕ್ರೀಡಾಪಟುಗಳ ಬಹು ವರ್ಷಗಳ ಕನಸು ನನಸಾಗುವುದೇ?
ರಾಯಚೂರು, ಜುಲೈ.25: ಅದು ಲಿಂಗಸುಗೂರು ಪಟ್ಟಣದ ಕ್ರೀಡಾಪಟುಗಳ ಬಹು ವರ್ಷಗಳ ಕನಸು. ಕ್ರೀಡಾಂಗಣ ಕಾಮಗಾರಿ ಪೂರ್ಣಗೊಂಡರೇ ಆಟಕ್ಕೆ ಅನುಕೂಲವಾದಿತು ಎಂದು ಆಸೆ ಪಟ್ಟಿದ್ದರು. ಆದ್ರೆ ಆ ಯೋಜನೆ ದಶಕ ಕಳೆಯುತ್ತ ಬಂದರೂ ಮುಗಿದಿಲ್ಲ. ಇದ್ರಿಂದ ಕ್ರೀಡಾಪಟುಗಳಿಗೆ ನಿರಾಸೆ ಮುಂದುವರೆದಿದೆ.
ಗಿಡ, ಕಸದಿಂದ ಆವರಿಸಿರೋ ಮೈದಾನ, ಪೆವಿಲಿಯನ್ ಕಾಮಗಾರಿ ಮುಗಿಸಿ ಕೈ ತೊಳೆದುಕೊಂಡ ಗುತ್ತಿಗೆದಾರರು..ಈ ಚಿತ್ರಣ ಕಂಡು ಬರೋದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ. ಕಾಮಗಾರಿಗೆ ಚಾಲನೆ ಸಿಕ್ಕು ಒಂಭತ್ತು ವರ್ಷ ಕಳೆದ್ರೂ ಪೂರ್ಣಗೊಂಡಿಲ್ಲ ಈ ಕ್ರೀಡಾಂಗಣ.
ಪಟ್ಟಣದ ಸರ್ಕಾರಿ ತೋಟದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ದಶಕ ಕಳೆಯುತ್ತ ಬಂದರೂ ಇನ್ನೂ ಕ್ರೀಡಾಂಗದ ಯಾವುದೇ ಕಾಮಗಾರಿ ಆಗಿಲ್ಲ. ಲಿಂಗಸುಗೂರಿನಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದು, ಸೂಕ್ತ ಕ್ರೀಡಾಂಗಣ ಇಲ್ಲದೇ ನಿರಾಸೆಗೊಂಡಿದ್ದಾರೆ.

ಕ್ರಿಕೆಟ್ ಸೇರಿದಂತೆ ಯಾವುದೇ ಆಟಕ್ಕೆ ಮೈದಾನವೇ ಇಲ್ಲ. 2009ರಲ್ಲಿ ಅಂದಿನ ಸರ್ಕಾರ ಲಿಂಗಸುಗೂರಿನಲ್ಲಿ ಕ್ರೀಡಾಂಗಣ ನಿರ್ಮಿಸಲು ಚಾಲನೆ ನೀಡಿತ್ತು. ತಾಲೂಕು ಕ್ರೀಡಾಂಗಣಕ್ಕಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಸುಮಾರು 92 ಲಕ್ಷ ರೂಪಾಯಿ ನಿಗದಿಪಡಿಸಿತ್ತು.
ಈಗಾಗಲೇ 50 ಲಕ್ಷ ರೂಪಾಯಿ ಬಿಡುಗಡೆಯಾಗಿದ್ದು, ಅಪೂರ್ಣ ಕಾಮಗಾರಿ ಮಾಡಿ ಕೈ ಬಿಟ್ಟಿದ್ದಾರೆ. ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ ಪೆವಿಲಿಯನ್ ಹೊರತುಪಡಿಸಿ ಯಾವುದೇ ಕೆಲಸಗಳು ಆಗಿಲ್ಲ.

ಟ್ರ್ಯಾಕ್, ವಾಲಿಬಾಲ್ ಕೋರ್ಟ್, ಲಾಂಗ್ ಜಂಪ್ ಪಿಟ್, ಬಾಸ್ಕೆಟ್ ಬಾಲ್ ಕೋರ್ಟ್ ಕೆಲಸಗಳು ನನೆಗುದಿಗೆ ಬಿದ್ದಿವೆ. ಎರಡು ಸರ್ಕಾರಗಳು ಹೋಗಿ ಮೂರನೇ ಸರ್ಕಾರ ಬಂದಿದೆ. ಈಗಲಾದರೂ ಕ್ರೀಡಾಂಗಣ ಕಾಮಗಾರಿ ಪೂರ್ಣಗೊಳ್ಳಲಿ. ಈ ಮೂಲಕ ಕ್ರೀಡಾಪಟುಗಳಿಗೆ ಅನುಕೂಲವಾಗಲಿ ಎಂಬುದು ಕ್ರೀಡಾಪ್ರೇಮಿಗಳ ಆಶಯ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications