• search
 • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಸ್ಕಿ ಉಪ ಚುನಾವಣೆ; ಪ್ರಚಾರದ ಕಾವು ಹೆಚ್ಚಿಸಿದ ವಿಜಯೇಂದ್ರ

|
Google Oneindia Kannada News

ರಾಯಚೂರು, ಏಪ್ರಿಲ್ 2; ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದೆ. ಏಪ್ರಿಲ್ 17ರಂದು ಉಪ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಶುಕ್ರವಾರ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಪ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಮಟ್ಟೂರು ಗ್ರಾಮದಲ್ಲಿ ಪ್ರಚಾರ ನಡೆಸಿದ ಅವರು, ಹಿರಿಯರ ಆಶೀರ್ವಾದವನ್ನು ಪಡೆದರು.

ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ? ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ?

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್‌ ಸೇರಿದಂತೆ ಹಲವಾರು ನಾಯಕರು ವಿಜಯೇಂದ್ರ ಜೊತೆಗಿದ್ದರು.

ಮಸ್ಕಿ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಮಸ್ಕಿ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಬಿರುಸಿನಿಂದ ಸಾಗಿದೆ. ಒಂದು ಕಡೆ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಕ್ಷೇತ್ರದಲ್ಲಿ ಪ್ರತಿದಿನ ಪ್ರಚಾರವನ್ನು ಕೈಗೊಂಡಿದ್ದಾರೆ.

ಬಿಜೆಪಿಯ ಗೆಲುವಿನ ನಾಗಲೋಟ ತಡೆಯಲು ಸಾಧ್ಯವಿಲ್ಲ: ಬಿ.ವೈ ವಿಜಯೇಂದ್ರಬಿಜೆಪಿಯ ಗೆಲುವಿನ ನಾಗಲೋಟ ತಡೆಯಲು ಸಾಧ್ಯವಿಲ್ಲ: ಬಿ.ವೈ ವಿಜಯೇಂದ್ರ

ಮಸ್ಕಿ ಉಪ ಚುನಾವಣೆಗೆ ಬಿಜೆಪಿಯಿಂದ ಕ್ಷೇತ್ರದ ಮಾಜಿ ಶಾಸಕರೇ ಆದ ಪ್ರತಾಪ್ ಗೌಡ ಪಾಟೀಲ್ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಆರ್‌. ​ಬಸನಗೌಡ ತುರ್ವಿಹಾಳ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

   ಮಹಾರಾಷ್ಟ್ರದಲ್ಲಿ ಸ್ಫೋಟವಾಗುತ್ತಿರುವ ಕೊರೊನಾ-ಲಾಕ್ ಡೌನ್ ಮಾಡುವ ಸೂಚನೆ ಕೊಟ್ಟ ಉದ್ಧವ್ ಠಾಕ್ರೆ | Oneindia Kannada

   2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕ್ಷೇತ್ರದಲ್ಲಿ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸನಗೌಡ ತುರ್ವಿಹಾಳ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ.

   English summary
   Karnataka BJP vice president B. Y. Vijayendra election campaign in Maski. By elections will be held on April 17, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X