• search
  • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರಿಗೆ ಸಿಎಂ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ: AIIMS ಕುರಿತು ಚರ್ಚೆ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಆಗಸ್ಟ್‌ 15: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದ್ದು, ಮತ್ತು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿ ಇರುವ ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಗಸ್ಟ್‌ 27ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಈ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಗುತ್ತದೆಂದು ಉಸ್ತುವಾರಿ ಸಚಿವರಾದ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪಿಸಲು ಒತ್ತಾಯಿಸಿ, ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಈ ಹಿಂದೆ ಏಮ್ಸ್ ವೇದಿಕೆಗೆ ಭೇಟಿ ನೀಡಿ, ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದೆ. ಅದರನ್ವಯ ನಾನು ಮತ್ತು ಶಾಸಕ ಡಾ.ಶಿವರಾಜ ಪಾಟೀಲ್ ಈ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದೇವೆ ಎಂದರು.

ರಾಯಚೂರು: ಹಟ್ಟಿ ಚಿನ್ನದ ಗಣಿಗೆ 75ರ ಹೊಳಪುರಾಯಚೂರು: ಹಟ್ಟಿ ಚಿನ್ನದ ಗಣಿಗೆ 75ರ ಹೊಳಪು

ಸಿಎಂ ಕೂಡ ರಾಯಚೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಬಗ್ಗೆ ಹೋರಾಟ ಸಮಿತಿಯೊಂದಿಗೆ ಮಾತನಾಡುವ ಭರವಸೆ ನೀಡಿದ್ದಾರೆ. ಏಮ್ಸ್‌ ಕೇಂದ್ರ ಸರಕಾರದ ಅಧೀನಕ್ಕೆ ಬರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸಹ ಆಗಸ್ಟ್‌ 27 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಏಮ್ಸ್‌ಗೆ ಸಂಬಂಧಿಸಿದಂತೆ ಅವರ ಗಮನಕ್ಕೆ ತಂದು ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ರಾಯಚೂರು ಜಿಲ್ಲೆ ಮಹಾತ್ವಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿದ್ದು, ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರಲಿವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಈಗಾಗಲೇ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. 404 ಎಕರೆ ಜಮೀನು ವಿಮಾನ ನಿಲ್ದಾಣಕ್ಕೆ ಮೀಸಲಿರಿಸಲಾಗಿದೆ. ಜಮೀನಿನ ಮಧ್ಯೆ ಕೆಲ ವಸತಿ ಇರುವುದರಿಂದ ಅವರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜಿಲ್ಲಾಡಳಿತಕ್ಕೆ ಈ ತಾಂತ್ರಿಕ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

Central Minister Nirmala Sitharaman and CM Bommai visits Raichur on August 27

ಅತಿವೃಷ್ಟಿಯಿಂದಾಗಿ ಉಂಟಾದ ಹಾನಿಯ ಬಗ್ಗೆ ಸಮೀಕ್ಷೆ ನಡೆಲಾಗಿದ್ದು, ಈಗಾಗಲೇ ಮೃತಪಟ್ಟ ಜನ, ಜಾನುವಾರುಗಳಿಗೆ ಪರಿಹಾರ ನೀಡಲಾಗಿದೆ. ಮಳೆಯಿಂದ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಸಮೀಕ್ಷೆ ನಡೆಸಿ, ಎನ್‌ಡಿಆರ್‌ಎಫ್ ನಿಯಮಗಳನ್ವಯ ಪರಿಹಾರ ನೀಡಲಾಗುತ್ತದೆ. ರಸ್ತೆಗಳ ಬಗ್ಗೆ ವರದಿ ಪಡೆದು ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ, ಅನುದಾನ ಬಿಡುಗಡೆ ಮಾಡಿ ರಸ್ತೆ ದುರಸ್ತಿ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು ಜಿಲ್ಲೆಯ ಅಭಿವೃದ್ಧಿಗೆ ಸದಾ ಬದ್ಧನಾಗಿ ಹೇಳಿದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಎಸ್ಪಿ ನಿಖಿಲ್ ಉಪಸ್ಥಿತರಿದ್ದರು.

English summary
Chief Minister Basavaraj Bommai and Central finance minister Nirmala Sitharaman visited Raichur on August 27, says district incharge minister Shankar B Patil in Raichur,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X