Get Updates
Get notified of breaking news, exclusive insights, and must-see stories!

ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಚಪ್ಪಲಿ ಹಾರ! ಸಿರವಾರದಲ್ಲಿ ಕಿಡಿ ಹೊತ್ತಿಸಿದ ಕಿಡಿಗೇಡಿಗಳು

ರಾಯಚೂರು ಜನವರಿ 31: ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ರಾಯಚೂರಿನ ಸಿರವಾರದಲ್ಲಿ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರದ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಿಗಿನ ಜಾವ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಬೆಳಿಗ್ಗೆ ಇದನ್ನು ಗಮನಿಸಿದ ಯುವಕರು ತಮ್ಮ ಸಮುದಾಯದವರಿಗೆ ಸುದ್ದಿ ತಲುಪಿಸಿದ್ದಾರೆ. ಇದರಿಂದ ಭಾರಿ ಸಂಖ್ಯೆಯಲ್ಲಿ ಸೇರಿದ ಜನ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Chappal garland on Tipu Sultans nameplate: protest by youth in Sirawar, Raichur

ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು, ರಸ್ತೆ ಮಧ್ಯೆ ಪ್ರತಿಭಟನೆ ಮಾಡಿದರೆ ಸಂಚಾರಕ್ಕೆ ತೊಂದರೆಯಾಗಲಿದೆ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಕಿಡಿಗೇಡಿಗಳನ್ನು ಬಂಧಿಸುವ ವರೆಗೂ ಪ್ರತಿಭಟನೆ ನಿಲ್ಲದು ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+