ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಯಾನ್ಸರ್ ರೋಗಿಗೆ ಪರಿಹಾರ ನಿಧಿಯಿಂದ 2 ಲಕ್ಷ ರೂ. ಚೆಕ್ ನೀಡಿದ ಎಚ್ಡಿಕೆ

|
Google Oneindia Kannada News

ರಾಯಚೂರು, ಜೂನ್ 26: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ರಾಯಚೂರಿನ ನಿವಾಸಿ, ನಂದಿನಿ ಪಾಟೀಲ್ ಎಂಬ ಮಹಿಳೆಯ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ನ್ನು ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ವಿತರಿಸಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಉಪಸ್ಥಿತರಿದ್ದರು.

ಗ್ರಾಮ ವಾಸ್ತವ್ಯ: ರಾಯಚೂರಿಗೆ ರೈಲಿನಲ್ಲಿ ತೆರಳಿದ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ: ರಾಯಚೂರಿಗೆ ರೈಲಿನಲ್ಲಿ ತೆರಳಿದ ಕುಮಾರಸ್ವಾಮಿ

ರಾಯಚೂರಿನ ಮಾನ್ವಿಯ ಕರೆಗುಡ್ಡದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿರುವ ಎಚ್ ಡಿ ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ವಿವಿಧ ಸಭೆಗಳನ್ನು ನಡೆಸಿದರು.

Chief minister HD Kumaraswamy distributes Rs 2 lakh cheque to a cancer patient

ರಾಯಚೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಕುಮಾರಸ್ವಾಮಿ ಅವರು ರಾಯಚೂರಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಜಿಲ್ಲಾಧಿಕಾರಿ ಶರತ್, ಐಜಿಪಿ, ಜಿಪಂ ಸಿಇಒ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಉಪಸ್ಥಿತರಿದ್ದರು.

ಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಮಾನ್ವಿ ತಾಲ್ಲೂಕಿನ ಕರೆಗುಡ್ಡೆ ಗ್ರಾಮಕ್ಕೆ ರಾಯಚೂರಿನಿಂದ ಕ.ರಾ.ರ.ಸಾ.ಸಂಸ್ಥೆ ಬಸ್ ನಲ್ಲಿ ತೆರಳಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿದರು.

English summary
Chief minister HD Kumaraswamy distributes RS 2 lakh cheque from CM relief fund to a woman in Raichuru who is suffering from cancer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X