ರಾಯಚೂರಿನಲ್ಲಿ ದಿಕ್ಕು ತಪ್ಪಿದ ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್
ರಾಯಚೂರು, ಫೆಬ್ರವರಿ 8: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಇಳಿಯಬೇಕಾದ ಜಾಗದಲ್ಲಿ ಇಳಿಯದೇ ಮತ್ತೊಂದು ಜಾಗದಲ್ಲಿ ಲ್ಯಾಂಡ್ ಆದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಇದು ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ನಲ್ಲಿ ಇಳಿಯದೆ, ಮತ್ತೊಂದು ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ಈ ಬೆಳವಣಿಗೆಯಿಂದ ಸಿಎಂ ಸ್ವಾಗತಕ್ಕೆ ಕಾದಿದ್ದ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಗೊಂದಲಕ್ಕೆ ಒಳಗಾದರು.

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ಅವರ ಮೊಮ್ಮಗನ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು. ಈ ಹಿನ್ನೆಲೆ ರಾಯಚೂರು ರಸ್ತೆಯ ಶ್ರೀನಿವಾಸ್ ಲೇಔಟ್ನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರಿಗಾಗಿ ವಿಶೇಷವಾಗಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದರೆ, ಹೆಲಿಕಾಪ್ಟರ್ ದಿಕ್ಕು ತಪ್ಪಿ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಖಾಸಗಿ ಹೆಲಿಪ್ಯಾಡ್ನಲ್ಲಿ ಇಳಿದಿದೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ಮತ್ತೊಂದು ಹೆಲಿಪ್ಯಾಡ್ನಲ್ಲಿ ಇಳಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಅದೇ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದರಿಂದ, ಅವರು ಇಳಿದ ಹೆಲಿಪ್ಯಾಡ್ನಲ್ಲೇ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಇದನ್ನು ತಾಂತ್ರಿಕ ದೋಷ ಎಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿಪಡಿಸಲಾಗಿದ್ದ ಹೆಲಿಪ್ಯಾಡ್ಗೆ ಬದಲಾಗಿ ಮತ್ತೊಂದು ಸ್ಥಳದಲ್ಲಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಕುಟುಂಬದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಎಂ ಲಿಂಗಸುಗೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಕಲಬುರಗಿ ರಸ್ತೆಯಲ್ಲಿರುವ ಹೆಲಿಪ್ಯಾಡ್ನಲ್ಲಿ ಇಳಿಯಿತು. ಇದರಿಂದ ಭದ್ರತಾ ವ್ಯವಸ್ಥೆಗಳಲ್ಲಿ ಸ್ವಲ್ಪ ಗೊಂದಲ ಉಂಟಾದರೂ, ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಈ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಇದು ತಾಂತ್ರಿಕ ದೋಷದಿಂದ ಉಂಟಾಯಿತೇ ಅಥವಾ ಇತರೆ ಕಾರಣಗಳಿಂದಾಗಿತೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಗೊಂದಲಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು











Click it and Unblock the Notifications