ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸ್ಕಿ ಕ್ಷೇತ್ರದ ಉಪ ಚುನಾವಣೆ; ಕೆ. ವಿರೂಪಾಕ್ಷಪ್ಪ ಬಿಜೆಪಿಗೆ

|
Google Oneindia Kannada News

ರಾಯಚೂರು, ಮಾರ್ಚ್ 09: ಮಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ. ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಬಿಜೆಪಿಗೆ ವಾಪಸ್ ಆಗಿದ್ದಾರೆ.

ಮಂಗಳವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಕೆ. ವಿರೂಪಾಕ್ಷಪ್ಪ ಬಿಜೆಪಿ ಸೇರಿದರು. ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್! ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್!

ಕೆ. ವಿರೂಪಾಕ್ಷಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಮೊದಲು ಬಿಜೆಪಿಯಲ್ಲಿದ್ದ ಅವರು ಕಾಂಗ್ರೆಸ್ ಸೇರಿದ್ದರು. ಈ ಪುನಃ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ವಾಪಸ್ ಆಗಿದ್ದಾರೆ. ಕುರುಬ ಸಮುದಾಯಕ್ಕೆ ಎಸ್ಪಿ ಮೀಸಲಾತಿ ನೀಡಬೇಕು ಎಂದು ನಡೆದ ಹೋರಾಟದಲ್ಲಿ ಅವರು ಪಾಲ್ಗೊಂಡಿದ್ದರು.

ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ

Congress Leader K Virupakshappa Joins BJP

ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ ಕುರುಬ ಸಮುದಾಯದ ಪ್ರಭಾವಿ ನಾಯಕ ಕೆ. ವಿರೂಪಾಕ್ಷಪ್ಪ ಅವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಗೆಲುವಿಗೆ ಕಾರ್ಯತಂತ್ರವನ್ನು ರೂಪಿಸಿದೆ.

ಮಸ್ಕಿ ಉಪ ಚುನಾವಣೆ: ದೀಪಾವಳಿ ಉಡುಗೊರೆ ಕೊಟ್ಟ ಬಿಜೆಪಿ ಸರ್ಕಾರ!ಮಸ್ಕಿ ಉಪ ಚುನಾವಣೆ: ದೀಪಾವಳಿ ಉಡುಗೊರೆ ಕೊಟ್ಟ ಬಿಜೆಪಿ ಸರ್ಕಾರ!

ಕೆಲವು ದಿನಗಳ ಹಿಂದೆ ಬಿಜೆಪಿಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಕೆ. ವಿರೂಪಾಕ್ಷಪ್ಪ ಅವರ ಜೊತೆ ಮಾತುಕತೆ ನಡೆಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಗೂ ಮಾತುಕತೆ ನಡೆಸಿದ ಬಳಿಕ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ 2019ರ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿತ್ತು. ಆಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

Recommended Video

'ಕೈ'ಬಿಟ್ಟು 'ಕಮಲ' ಹಿಡಿದ ಮಾಜಿ ಸಂಸದ | Oneindia Kannada

"ಬಿಜೆಪಿಯಿಂದ ಕರೆದುಕೊಂಡು ಬಂದು ಅನ್ಯಾಯ ಮಾಡಿದ್ದಾರೆ. ನನಗೆ ಟಿಕೆಟ್ ಕೈತಪ್ಪಲು ಸಿದ್ದರಾಮಯ್ಯ ಕಾರಣ. ಒಂದೇ ಕುಟುಂಬದ ಇಬ್ಬರಿಗೆ ಟಿಕೆಟ್ ಕೊಡಿಸಿದ್ದಾರೆ. ಹಿಟ್ನಾಳ ಕುಟುಂಬ ಮತ್ತು ಸಿದ್ದರಾಮಯ್ಯ ಸಂಬಂಧ ಹೇಗಿದೆ? ಎನ್ನುವುದು ಎಲ್ಲರಿಗೂ ಗೊತ್ತು" ಎಂದು ಟೀಕಿಸಿದ್ದರು.

English summary
Congress leader and Koppal seat former MP K. Virupakshappa joined BJP. K. Virupakshappa Kuruba community leader joined party in the presence of Chief Minister B. S. Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X