ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸ್ಕಿಗೆ ಬಂದ ಕಾಂಗ್ರೆಸ್ ನಾಯಕರು; ಬೃಹತ್ ಶಕ್ತಿ ಪ್ರದರ್ಶನ

|
Google Oneindia Kannada News

ರಾಯಚೂರು, ನವೆಂಬರ್ 23 : ಆರ್. ಆರ್. ನಗರ, ಶಿರಾ ಉಪ ಚುನಾವಣೆ ಬಳಿಕ ರಾಜಕೀಯ ಪಕ್ಷಗಳು ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ತಯಾರಿ ಆರಂಭಿಸಿವೆ. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಬೇಕಿದೆ.

2018ರ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದಿದ್ದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಅವರು ಈಗ ಬಿಜೆಪಿಯಲ್ಲಿದ್ದಾರೆ.

ಮಸ್ಕಿ ಉಪ ಚುನಾವಣೆ: ದೀಪಾವಳಿ ಉಡುಗೊರೆ ಕೊಟ್ಟ ಬಿಜೆಪಿ ಸರ್ಕಾರ!ಮಸ್ಕಿ ಉಪ ಚುನಾವಣೆ: ದೀಪಾವಳಿ ಉಡುಗೊರೆ ಕೊಟ್ಟ ಬಿಜೆಪಿ ಸರ್ಕಾರ!

ಮಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ. ಚುನಾವಣಾ ಆಯೋಗ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಬೇಕಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆ ಘೋಷಣೆಗೂ ಮುನ್ನವೇ ಅಖಾಡಕ್ಕೆ ಇಳಿದಿವೆ.

ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ

ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರುವಿಹಾಳರನ್ನು ಕಾಂಗ್ರೆಸ್‌ಗೆ ಸೆಳೆದಿದ್ದು, ಉಪ ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಬಿಜೆಪಿ ಪರವಾಗಿ ಉಪ ಚುನಾವಣೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗಮಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?

ಮಸ್ಕಿಯಲ್ಲಿ ಕಾಂಗ್ರೆಸ್ ಸಮಾವೇಶ

ಮಸ್ಕಿಯಲ್ಲಿ ಕಾಂಗ್ರೆಸ್ ಸಮಾವೇಶ

ಸೋಮವಾರ ಕಾಂಗ್ರೆಸ್ ಮಸ್ಕಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಮಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಗೆ ಮುನ್ನವೇ ಕ್ಷೇತ್ರದಲ್ಲಿ ಪಕ್ಷ ಶಕ್ತಿ ಪ್ರದರ್ಶನ ನಡೆಸಿದೆ. ಈ ಮೂಲಕ ಉಪ ಚುನಾವಣೆಗೆ ಸಿದ್ಧ ಎಂಬ ಸಂದೇಶ ಕೊಟ್ಟಿದೆ.

ಬೃಹತ್ ಸಮಾವೇಶ

ಬೃಹತ್ ಸಮಾವೇಶ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಸ್ಕಿಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸನಗೌಡ ತುರುವಿಹಾಳ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಮಸ್ಕಿ ಪಟ್ಟಣದಲ್ಲಿ ಇಂದು ಸಮಾವೇಶ ಆಯೋಜಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂತಾದ ನಾಯಕರು ಪಾಲ್ಗೊಂಡಿದ್ದರು.

ಅಭ್ಯರ್ಥಿ ಸಿಕ್ಕಿಲ್ಲ ಎಂದರೆ ನಾಚಿಗೇಡು

ಅಭ್ಯರ್ಥಿ ಸಿಕ್ಕಿಲ್ಲ ಎಂದರೆ ನಾಚಿಗೇಡು

"ಮಸ್ಕಿ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯೇ ಸಿಕ್ಕಿಲ್ಲ ಎಂದರೆ ನಾಚಿಗೇಡು. ಕಾಂಗ್ರೆಸ್ ಯಾರನ್ನೇ ಅಭ್ಯರ್ಥಿ ಮಾಡಿದರೂ ಆ ಕ್ಷೇತ್ರವನ್ನು ಹೇಗೆ ಗೆಲ್ಲಬೇಕು? ಎಂದು ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು ತಂತ್ರ ರೂಪಿಸಲಿದ್ದಾರೆ" ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

Recommended Video

ಮಹಾಮಾರಿಗೆ Gandhi ಮರಿ ಮೊಮ್ಮಗ ಬಲಿ | Oneindia Kannada
2018ರ ಫಲಿತಾಂಶ

2018ರ ಫಲಿತಾಂಶ

ಕಳೆದ ಚುನಾವಣೆಯಲ್ಲಿ ಮಸ್ಕಿಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸನಗೌಡ ತುರುವಿಹಾಳ 60,174 ಮತಗಳನ್ನು ಪಡೆದು ಕಾಂಗ್ರೆಸ್‌ನ ಪ್ರತಾಪ್ ಗೌಡ ಪಾಟೀಲ್ ವಿರುದ್ಧ 213 ಮತಗಳ ಅಂತರದಿಂದ ಸೋತಿದ್ದರು. ಈಗ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ, ಬಸನಗೌಡ ತುರುವಿಹಾಳ ಕಾಂಗ್ರೆಸ್‌ನಲ್ಲಿದ್ದಾರೆ.

English summary
KPCC president D. K. Shivakumar and Opposition leader Siddaramaiah participated in party rally in Maski, Raichur district ahead of the by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X