ರಾಯಚೂರು: ಮೂವರು ಪೊಲೀಸ್ ಕಾನ್ಸ್ ಟೆಬಲ್ ಗೆ ಕೊರೊನಾ ವೈರಸ್

ರಾಯಚೂರು, ಜೂನ್ 4: ಕ್ವಾರಂಟೈನ್ ಕರ್ತವ್ಯ ನಿರ್ವಹಿಸುತ್ತಿದ್ದ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಮೂರು ಜನ ಪೊಲೀಸ್ ಕಾನ್ಸ್ ಟೆಬಲ್ ಗಳಿಗೆ ಕೊರೊನಾ ವೈರಸ್ ಸೋಂಕು ಧೃಡಪಟ್ಟಿದೆ ಎಂದು ರಾಯಚೂರು ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮಾಹಿತಿ ನೀಡಿದ್ದಾರೆ.

Recommended Video

      ಗ್ರೀನ್ ಝೋನ್ ನಲ್ಲಿದ್ದ ಹಾಸನದಲ್ಲಿ 5 ಕೊರೊನಾ‌ ಕೇಸ್. ಸೋಂಕಿತರ ಹಿಸ್ಟರಿ ಏನು? | Hassan

      ಪೊಲೀಸ್ ಕಾನ್ಸ್ ಟೆಬಲ್ ಗಳು 25 ರಿಂದ 30 ವರ್ಷದವರಾಗಿದ್ದು, ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕೊರೊನಾ ವೈರಸ್ ಸೋಂಕು ವಕ್ಕರಿಸಿದೆ.

      ಮಹಾರಾಷ್ಟ್ರದಿಂದ ಬಂದಿರುವ ವಲಸಿಗರು ವಿಶ್ವವಿದ್ಯಾಲಯದಲ್ಲಿ ಕ್ವಾರಂಟೈನ್ ಇದ್ದರು. ಪೊಲೀಸ್ ಕಾನ್ಸ್ ಟೆಬಲ್ ಗಳಿಗೆ ಕೋವಿಡ್-19 ಪತ್ತೆಯಾಗಿರುವುದರಿಂದ ಪಶ್ಚಿಮ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ರಾಯಚೂರು ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      Coronavirus Infected For Police Constable In Raichur

      ಜೂನ್ ೪ ರಂದು ಮೂರು ಜನ ಕಾನ್ಸ್ ಟೆಬಲ್ ಗಳನ್ನುನ್ನು ರಾಯಚೂರು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಈ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿರುವವರಿಗಾಗಿ ಮಾಹಿತಿ ಪಡೆಯಲಾಗುತ್ತಿದೆ.

      ರಾಯಚೂರು ಪಶ್ಚಿಮ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಪಶ್ಚಿಮ ಠಾಣೆಯ ಸರಹದ್ದಿನ ದೂರುದಾರರು ತಾತ್ಕಾಲಿಕವಾಗಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ನೀಡಲು ಕೋರಿದೆ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+