ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅಸ್ತು: ಶಾಸಕರ ನಡುವೆ ಕ್ರೆಡಿಟ್ ವಾರ್
ರಾಯಚೂರು ಡಿಸೆಂಬರ್ 9: ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ಸಿರವಾರ, ದೇವದುರ್ಗ ಉಭಯ ತಾಲೂಕಿನ ನಡುವೆ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರವು ಅನುಮೋದನೆ ನೀಡಿದೆ.
ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಸಂತಸದ ಸಂಗತಿಯೇ ಆದರೂ ಇದರಿಂದ ಈಗ ರಾಯಚೂರು ಜಿಲ್ಲೆಯ ದೇವದುರ್ಗ , ಮಾನ್ವಿ ಹಾಗೂ ರಾಯಚೂರು ಗ್ರಾಮಾಂತರ ಶಾಸಕರುಗಳ ನಡುವೆ ಕ್ರೆಡಿಟ್ ವಾರ್ ಪ್ರಾರಂಭವಾಗಿದೆ.
ಉಭಯ ತಾಲೂಕಿನ ಬಾಗಲವಾಡ, ನೀರಮಾನ್ವಿ , ಮಲ್ಲಟ, ಹೀರಾ, ಅತ್ತನೂರು, ಚಿಕ್ಕಕೊಟ್ನೇಕಲ್, ತಡಕಲ್ , ಮಲ್ಲದಗುಡ್ಡ ಹಾಗೂ ಗ್ರಾಮಾಂಯತರ ಕ್ಷೇತ್ರದ ವ್ಯಾಪ್ತಿಯ ರಾಜಲಬಂಡಾ, ಸಾದಾಪೂರ ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ.

ದೇವದುರ್ಗ ಶಾಸಕರಾದ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಮುಂದಿನ ಸ್ಪರ್ಧಾಕಾಂಕ್ಷಿಯಾಗಿರುವ ಕೆ.ಶಿವನಗೌಡ ನಾಯಕರ ಒತ್ತಾಸೆಯಿಂದಲೇ ಈ ಎಲ್ಲಾ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾನ್ವಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಳ್ಳುವ ಮೂಲಕ ಕ್ರೆಡಿಟ್ ವಾರ್ ಪ್ರಾರಂಭವಾಗಿದೆ.
ಇದಕ್ಕೆ ವಿರುದ್ಧವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ವೆಂಕಟಪ್ಪ ನಾಯಕರ ಒತ್ತಾಸೆಯಿಂದಲೇ ಈ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವೆಂಕಟಪ್ಪ ನಾಯಕರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಹಂಚಿಕೊಳ್ಳುವ ಮೂಲಕ ಶಿವನಗೌಡ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.
ಮಾನ್ವಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಕುರ್ಡಿ ಹೋಬಳಿಯ ರಾಜಲಬಂಡಾ, ಸಾದಾಪೂರ ಗ್ರಾಮಗಳ ಬಹುದಿನಗಳ ಬೇಡಿಕೆಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಯ ಕ್ರೆಡಿಟ್‌ಅನ್ನು ಕೂಡ ಮಾನ್ವಿ ಶಾಸಕರು ಹಾಗೂ ದೇವದುರ್ಗದ ಶಾಸಕರು ಪಡೆಯುತ್ತಿರುವುದು ವಿಪರ್ಯಾಸವೇ ಸರಿ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಶಾಸಕ ಬಸನಗೌಡ ದದ್ದಲ್ ಅಭಿಮಾನಿಗಳು ಶಾಸಕರು ಸದನದಲ್ಲಿ ಧ್ವನಿ ಎತ್ತಿದ ವೀಡಿಯೋವನ್ನು ಹಾಗೂ ಪತ್ರಿಕಾ ವರದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಒಟ್ಟಿನಲ್ಲಿ ಸರ್ಕಾರದಿಂದ ಅನುಮೋದನೆಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ರೆಡಿಟ್ ವಾರ್‌ನಿಂದ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಮುನ್ನವೇ ರಂಗು ಬಂದಿದೆ. ಅಲ್ಲದೇ ಪರೋಕ್ಷವಾಗಿ ದೇವದುರ್ಗ ಶಾಸಕರ ಸ್ವಾಗತಕ್ಕೆ ಹಾಕಿದ ರತ್ನಗಂಬಳಿಯೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications