ರಾಯಚೂರು: ಲವ್ ಕೇಸರಿ ಹೇಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಕಾಂಗ್ರೆಸ್, ಜೆಡಿಎಸ್
ರಾಯಚೂರ ಏಪ್ರಿಲ್ 12: ಕಳೆದ ಏಪ್ರಿಲ್ 10ರಂದು ರಾಯಚೂರಿನಲ್ಲಿ ಆಯೋಜಿಸಿದ್ದ ಶ್ರೀರಾಮ ನವಮಿ ಕಾರ್ಯಕ್ರಮದಲ್ಲಿ ಅನ್ಯಧರ್ಮದ ಕುರಿತು ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಹಿಂದುಳಿದ ಅಲ್ಪಸಂಖ್ಯಾತ ಐಕ್ಯ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಿದೆ.
ಶ್ರೀರಾಮನವಮಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಬದಲಿಗೆ ಲವ್ ಕೇಸರಿ ಎನ್ನುವ ಟ್ರೆಂಡ್ ಸೃಷ್ಟಿಯಾಗಬೇಕು ಎಂದು ಶ್ರೀರಾಮಸೇನೆ ಕರೆ ನೀಡಿದೆ. ಹೆಣ್ಣು ಮಕ್ಕಳನ್ನು ಮಕ್ಕಳು ಹೆರುವ ಯಂತ್ರ ಎಂದು ಅವರು ಅಂದುಕೊಂಡಿದ್ದಾರೆ. ನಮ್ಮ ಪ್ರತಿ ಕಾರ್ಯಕರ್ತ ಕೂಡಾ ಲವ್ ಜಿಹಾದ್ ಪ್ರತಿಯಾಗಿ ಲವ್ ಕೇಸರಿ ಮಾಡಬೇಕು. ರಾಯಚೂರಿನಲ್ಲಿ ಒಂದೇ ಒಂದು ಲವ್ ಜಿಹಾದ್ ಪ್ರಕರಣ ಬರಬಾರದು ಎಂದು ರಾಮಚಂದ್ರನಗೌಡ ಹೇಳಿರುವುದು ವಿವಾದಕ್ಕೆ ಎಡೆ ಮಾಡಿದೆ.
ಮಾತ್ರವಲ್ಲದೆ ಬಹಿರಂಗವಾಗಿ ಆಯುಧಗಳನ್ನು ಪ್ರದರ್ಶಿಸಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಜೊತೆಗೆ ಕಾರ್ಯಕ್ರಮಕ್ಕೆ ಹಣಕಾಸಿನ ನೆರವು ನೀಡಿ ಜನರಲ್ಲಿ ಭಯವುಂಟು ಮಾಡುವ ಶಡ್ಯಂತ್ರದಲ್ಲಿ ಭಾಗವಹಿಸಿದವರು ಹಾಗೂ ಖಡ್ಗಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರುವ ಶ್ರೀರಾಮಸೇನೆಯ ನಾಯಕರು ಹಾಗೂ ಉದ್ರೇಕಕಾರಿ ಭಾಷಣ ಮಾಡಿ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿರುವ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರು ಹಾಗೂ ವೇದಿಕೆಯ ಮೇಲೆ ಹಾಜರಿದ್ದ ವಿವಿಧ ಮುಖಂಡರ ಮೇಲೆ ಕ್ರಿಮಿನಲ್ ಮುಕದ್ದಮೆ ಹೂಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ. ವೇಳೆ ರಾಜ್ಯ ಕಾಂಗ್ರೆಸ್ ಕೆಪಿಸಿಸಿ ವಕ್ತಾರ ವಸಂತ್ ಕುಮಾರ್, ರಾಯಚೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಎಂ.ವಿರೂಪಾಕ್ಷಿ ಇತರರು ಭಾಗಿಯಾಗಿದ್ದರು.

ಈ ಬಗ್ಗೆ ಒನ್‌ಇಂಡಿಯಾ ಕನ್ನಡದೊಂದಿಗೆ ಮಾತನಾಡಿ ಬಿಜೆಪಿ ಶಾಸಕ ಶಿವರಾಜ ಪಾಟೀಲ್, 'ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ ಎಂದು ಹೇಳಿದರು. ಈ ರೀತಿಯಾದ ಹೇಳಿಕೆ ಯಾರೂ ಕೂಡ ಸಹಿಸುವುದಿಲ್ಲ. ಇಂತಹ ಹೇಳಿಕೆಗಳು ಸಮಾಜದಲ್ಲಿ ಶಾಂತಿ ಕದಡುತ್ತವೆ ಎಂದು ಅವರು ಹೇಳಿದರು. ಜೊತೆಗೆ ಇಂಥಹ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications