ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Assembly election: ಮುದಗಲ್‌ ಹೋಬಳಿಯನ್ನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡುವುದಾಗಿ ಭರವಸೆ ನೀಡುತ್ತಿರುವ ರಾಜಕಾರಣಿಗಳು, ಆಕ್ರೋಶ

ಮುದಗಲ್‌ ಹೋಬಳಿಯನ್ನು ತಾಲೂಕು ಕೇಂದ್ರವಾಗಿ ಮಾಡುತ್ತೇವೆ ಎಂದು ರಾಜಕಾರಣಿಗಳು ಭರವಸೆ ನೀಡುತ್ತಿದ್ದು, ಹೀಗೆ ಭರವಸೆ ನೀಡಿ ಸುಮ್ಮನಾಗುತ್ತಿರುವ ರಾಜಕಾರಣಿಗಳ ವಿರುದ್ಧ ಮುದಗಲ್‌ ಜನರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ.

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು ಫೆಬ್ರವರಿ, 01: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮುದಗಲ್‌ ಹೋಬಳಿಯನ್ನು ನೂತನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.

ನೂತನ ತಾಲೂಕು ಘೋಷಣೆಗೆ ಈ ಭಾಗದ ಜನ ನಾಲ್ಕು ದಶಕಗಳಿಂದ ಕಾಯುತ್ತಿದ್ದಾರೆ. ಮುದಗಲ್‌ ಹೋಬಳಿ 1952 ರಿಂದ 2008 ರವರೆಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿತ್ತು. 2008 ರಲ್ಲಿ ಕ್ಷೇತ್ರ ಪುನರ್‌ ವಿಂಗಡನೆ ವೇಳೆ ಲಿಂಗಸುಗೂರು ಕ್ಷೇತ್ರಕ್ಕೆ ಸೇರಿಸಲಾಯಿತು. ಈ ಹೋಬಳಿಯವರು ವಿವಿಧ ಕೇತ್ರಗಳನ್ನು ಪ್ರತಿನಿಧಿಸಿ ಗೆದ್ದು ಶಾಸಕರು, ಸಚಿವರಾಗಿದ್ದಾರೆ. ಆದರೆ ಮುದಗಲ್‌ ತಾಲೂಕು ಕೇಂದ್ರವನ್ನಾಗಿ ಮಾಡಿಸಲು ಯಾರೂ ಮನಸ್ಸು ಮಾಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆ: ಪ್ರಜಾಧ್ವನಿ ಯಾತ್ರೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಿಧಾನಸಭಾ ಚುನಾವಣೆ: ಪ್ರಜಾಧ್ವನಿ ಯಾತ್ರೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ರೈತರು ಆರ್ಥಿಕವಾಗಿ ಹಿಂದುಳಿದಿದ್ದಾರೆ

ಇಲ್ಲಿ ಅಂತಹ ಅಭಿವೃದ್ಧಿಯಾಗಿಲ್ಲ, ಕೈಗಾರಿಕೆಗಳಿಲ್ಲ. ಕಲ್ಲುಕ್ವಾರಿ ಬಿಟ್ಟರೆ ಜನತೆಗೆ ಕೆಲಸ ನೀಡುವ ಉದ್ಯಮಗಳಿಲ್ಲ. ರೈತರು ಆರ್ಥಿಕ ಹಾಗೂ ಸಾಮಾಜಿಕವಾಗಿ ತೀರಾ ಹಿಂದುಳಿದಿದ್ದಾರೆ. ಆದ್ದರಿಂದ ಇದು ಹಿಂದುಳಿದ ಹೋಬಳಿಯಾಗಿಯೇ ಉಳಿದಿದೆ. ಮುದಗಲ್‌ ತಾಲೂಕು ಘೋಷಣೆಗೆ ಆಗ್ರಹಿಸಿ ಕುಷ್ಟಗಿ ಕ್ಷೇತ್ರದಿಂದ ಶಾಸಕರಾಗಿದ್ದ ಮಾಜಿ ಶಾಸಕ ಎಂ.ಗಂಗಣ್ಣ ಅವರ ನೇತೃತ್ವದಲ್ಲಿ ಅನೇಕ ಹಿರಿಯರು ಹೋರಾಟ ಪ್ರಾರಂಭಿಸಿದ್ದರು. ಆದರೆ ಹೋರಾಟಕ್ಕೆ ಯಶಸ್ಸು ಸಿಗಲಿಲ್ಲ. ದಶಕದ ಹಿಂದೆ ಹೊಸ ತಲೆಮಾರಿನ ಯುವಜನತೆ ಮತ್ತೆ ತಾಲೂಕು ರಚನೆಗಾಗಿ ನೂತನ ತಾಲೂಕು ರಚನಾ ಹೋರಾಟ ಸಮಿತಿ ರಚಿಸಿ ಹೋರಾಟ ಪ್ರಾರಂಭಿಸಿದ್ದರು. ಇವರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ, ಡಿ.ಎಸ್.ಎಸ್‌ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ.

Demand to Mudgal taluk center, people outrage against politicians

ಭೌಗೋಳಿಕವಾಗಿ ಪಟ್ಟಣ ದೊಡ್ಡದಾಗಿದೆ

ಮುದಗಲ್ ಪಟ್ಟಣಕ್ಕೆ ತಾಲೂಕು ಘೋಷಣೆಗೆ ಇರಬೇಕಾದ ಎಲ್ಲ ಅರ್ಹತೆಗಳೂ ಇವೆ. ಭೌಗೋಳಿಕವಾಗಿ ಪಟ್ಟಣ ದೊಡ್ಡದಾಗಿದೆ. ಈಗಾಗಲೇ ಇಲ್ಲಿ ಅನೇಕ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಎಪಿಎಂಸಿ, ಉಪ ತಹಶೀಲ್ದಾರ್‌, ರೈತ ಸಂಪರ್ಕ ಕೇಂದ್ರ ಹಾಗೂ ಖಜಾನೆ ಇಲಾಖೆ ಕಚೇರಿಗಳು ಇಲ್ಲಿವೆ. ಕೃಷ್ಣಾ ನದಿ ಹತ್ತಿರದಲ್ಲಿದ್ದರೂ ಈ ಹೋಬಳಿ ನೀರಾವರಿಯಿಂದ ವಂಚಿತವಾಗಿದೆ. ಅಭಿವೃದ್ಧಿಯಾಗಬೇಕಾದರೆ ತಾಲೂಕು ಘೋಷಣೆ ಮಾಡಬೇಕು ಎಂದು ಜನ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಸಿದ್ಧತೆ ನಡೆಸಿದ್ದು, ರಾಜಕಾರಣಿಗಳು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮುದಗಲ್‌ ಉತ್ಸವ ಮಾಡುತ್ತೇವೆ ಹಾಗೂ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಈಚೆಗೆ ಪಟ್ಟಣದಲ್ಲಿ ನಡೆದ ಜೆಡಿಎಸ್‌ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ನಾನು ಅಧಿಕಾರಕ್ಕೆ ಬಂದರೆ ಮುದಗಲ್‌ ಅನ್ನು ನೂತನ ತಾಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಆದ್ದರಿಂದ ಚುನಾವಣೆಯ ನಂತರವಾದರೂ ಜನರ ಕನಸು ನನಸಾಗಲಿದೆಯೇ ನೋಡಬೇಕಿದೆ.

English summary
Karnataka assembly election 2023, Demand to Mudgal taluk central, Mudgal people outrage against politicians, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X