ರಾಯಚೂರು ವಿಮಾನ ನಿಲ್ದಾಣದ ಕನಸಿಗೆ ಮರುಜೀವ

ರಾಯಚೂರು, ನವೆಂಬರ್ 26 : ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕನಸಿಗೆ ರೆಕ್ಕೆ ಬಂದಿದೆ. ಯರಮರಸ್ ವಿಮಾನ ತಂಗುದಾಣದ ಬಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಮನವಿ ಮಾಡಲು ಸಿದ್ಧತೆ ನಡೆದಿದೆ.

ಯರಮರಸ್ ಬಳಿ ಇರುವ 400 ಎಕರೆ ಪ್ರದೇಶದಲ್ಲಿ ವಿಮಾನ ತಂದುದಾಣವಿದೆ. ಅಲ್ಲೇ ವಿಮಾನ ನಿಲ್ದಾಣ ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಾಂತ್ರಿಕ ಒಪ್ಪಿಗೆ ಕೊಟ್ಟಿದೆ. ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಕೊಡಬೇಕಿದೆ.

ಶಾಸಕ ಶಿವನಗೌಡ ನಾಯಕ ಈ ಕುರಿತು ಮಾಹಿತಿ ನೀಡಿದ್ದಾರೆ, "ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶೀಘ್ರವೇ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

DPR For Raichur Airport Project Soon

ಗುಜರಾತ್ ಮತ್ತು ಮುಂಬೈ ಮೂಲಕ ಎರಡು ಕಂಪನಿಗಳು ವಿಮಾನ ನಿಲ್ದಾಣ ಸ್ಥಾಪನೆಗೆ ಸ್ಥಳವನ್ನು ಪರಿಶೀಲನೆ ನಡೆಸಿವೆ. ರಾಜ್ಯ ಸರ್ಕಾರ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಕ್ರಿಯಾ ಯೋಜನೆ ಸಿದ್ಧಪಡಿಸಲು ಅನುಮತಿ ನೀಡಬೇಕಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 50 ಕೋಟಿ ಅನುದಾನ ನೀಡಲಾಗಿದೆ. ಡಿಪಿಆರ್ ಸಿದ್ಧಪಡಿಸಲು ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಗೆ ಸರ್ಕಾರದ ಅನುಮತಿ ಬೇಕಿದೆ. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಬೇಕು.

ರಾಯಚೂರು ಜಿಲ್ಲಾಧಿಕಾರಿಗಳು ಈ ಕುರಿತು ಮಾತನಾಡಿದ್ದಾರೆ. "ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಈಗಾಗಲೇ 50 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಡಿಪಿಆರ್ ಮಾಡಲು ಅನುಮತಿಗಾಗಿ ಕಾಯಲಾಗುತ್ತಿದೆ" ಎಂದು ಹೇಳಿದ್ದಾರೆ.

ಮುಂದಿನ ಮೂರು ಅಥವ ನಾಲ್ಕು ತಿಂಗಳಿನಲ್ಲಿ ಡಿಪಿಆರ್ ಪೂರ್ಣಗೊಳ್ಳಲಿದ್ದು, 2021ರ ಮಾರ್ಚ್‌ ಅಥವ ಏಪ್ರಿಲ್‌ನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲು ಚಿಂತನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+