ರಾಯಚೂರು : ವಿದ್ಯಾರ್ಥಿನಿ ಸಾವಿನ ತನಿಖೆ ಆರಂಭಿಸಿದ ಸಿಐಡಿ

ರಾಯಚೂರು, ಏಪ್ರಿಲ್ 22 : ರಾಜ್ಯಾದ್ಯಂತ ಬಾರಿ ಸಂಚಲನ ಉಂಟು ಮಾಡಿರುವ ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ಸಿಐಡಿ ತಂಡ ರಾಯಚೂರಿನಲ್ಲಿ ಬೀಡು ಬಿಟ್ಟಿದ್ದು, ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಿಐಡಿ ಎಸ್ಪಿ ಡಾ.ಶರಣಪ್ಪ ಅವರು ರಾಯಚೂರಿಗೆ ಆಗಮಿಸಿದ್ದಾರೆ. ಡಿವೈಎಸ್‌ಪಿ ಶೀಲವಂತ ಅವರ ಜೊತೆಗೆ ವಿದ್ಯಾರ್ಥಿನಿ ಶವ ಪತ್ತೆಯಾದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. 'ಪ್ರಕರಣದ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸುವಂತೆ' ಮನವಿ ಮಾಡಿದ್ದಾರೆ.

CID

'ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಎಲ್ಲಾ ಆಯಾಮಗಳಲ್ಲಿ ಕೂಲಂಕುಶ ತನಿಖೆ ನಡೆಸಲಾಗುತ್ತದೆ. ವಿದ್ಯಾರ್ಥಿನಿ ಕುಟುಂಬದವರನ್ನು ಭೇಟಿ ಮಾಡಿ, ಮಾಹಿತಿ ಸಂಗ್ರಹಿಸಲಾಗುತ್ತದೆ' ಎಂದು ಡಾ.ಶರಣಪ್ಪ ಹೇಳಿದರು.

ಬೆಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳನ್ನು ಸಿಐಡಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ. ಸಿಬ್ಬಂದಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+