ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ, ಡಿಕೆ ಶಿವಕುಮಾರ್ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ? ಪ್ರಜ್ವಲ್ ರೇವಣ್ಣ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಜೂ28: ಕುಟುಂಬ ರಾಜಕಾರಣದ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ಟೀಕಿಸುವ ನೈತಿಕತೆ ಯಾರಿಗೂ ಇಲ್ಲ. ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲಿಯೂ ಕುಟುಂಬ ರಾಜಕಾರಣ ನಡೆಯುತ್ತಿದೆ' ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,'ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಯಲ್ಲಿ ಮೂವರು, ಕೆಪಿಸಿಸಿ ಅಧ್ಯಕ್ಷೆ ಡಿ.ಕೆ.ಶಿವಕುಮಾರ ಮನೆಯಲ್ಲಿ ಮೂವರು, ಸಿಎಂ ಉದಾಸಿ, ಸತೀಶ ಜಾರಕಿಹೊಳಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದಾಗ್ಯೂ ಕೇವಲ ದೇವೇಗೌಡರ ಕುಟುಂಬವನ್ನು ಮಾತ್ರ ದೂಷಿಸುವುದು ಸರಿಯಲ್ಲ ಎಂದರು.

ಮುಂಗಾರಿನ ಆರಂಭದ ಹಬ್ಬ: ಮಣ್ಣಿನ ಎತ್ತುಗಳಿಗೆ ಪೂಜಿಸುವ ಮಣ್ಣೆತ್ತಿನ ಅಮಾವಾಸ್ಯೆಮುಂಗಾರಿನ ಆರಂಭದ ಹಬ್ಬ: ಮಣ್ಣಿನ ಎತ್ತುಗಳಿಗೆ ಪೂಜಿಸುವ ಮಣ್ಣೆತ್ತಿನ ಅಮಾವಾಸ್ಯೆ

ದೇವೇಗೌಡ ಕುಟುಂಬ ಮಾತ್ರನಾ ಕುಟುಂಬ ರಾಜಕಾರಣ, ಡಾಕ್ಟರ್ ಮಕ್ಕಳು ಡಾಕ್ಟರ್ ಆಗುತ್ತಿಲ್ಲವೇ? ಹಾಗೆಯೇ ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳು ಆಗುವುದರಲ್ಲಿ ತಪ್ಪೇನಿದೆ' ಎಂದು ಪ್ರಜ್ವಲ್ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲಬು

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲಬು

ರಾಯಚೂರಿನಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣದ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಸಾವಿರಾರು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಪಕ್ಷಕ್ಕಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿದ್ದಾರೆ. ಪಕ್ಷವನ್ನು ಕೆಳ ಮಟ್ಟದಿಂದ ಬೆಳೆಸುವ ಕೆಲಸವಾಗಬೇಕಿದೆ. ರಾಜ್ಯದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯಚಟುವಟಿಕೆ ಶುರುವಾಗಿದೆ. ಶೀಘ್ರದಲ್ಲಿಯೇ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಇನ್ನೂ ಎರಡು ದಿನ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿರುವೆ' ಎಂದು ಅವರು ಹೇಳಿದರು.

ಸ್ಲಂ ನಿವಾಸಿಗಳಿಗೆ ಮಾಲೀಕತ್ವದ ಪತ್ರ ನೀಡದ ರಾಯಚೂರು ನಗರಸಭೆಸ್ಲಂ ನಿವಾಸಿಗಳಿಗೆ ಮಾಲೀಕತ್ವದ ಪತ್ರ ನೀಡದ ರಾಯಚೂರು ನಗರಸಭೆ

ಜನರನ್ನು ಸುಲಭವಾಗಿ ತಲುಪಲು ಮತ್ತು ಪಕ್ಷ ಸಂಘಟನೆಗೆ ಹೆಚ್ಚಿನ ಬಲ

ಜನರನ್ನು ಸುಲಭವಾಗಿ ತಲುಪಲು ಮತ್ತು ಪಕ್ಷ ಸಂಘಟನೆಗೆ ಹೆಚ್ಚಿನ ಬಲ

ರಾಜಕೀಯದಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಮಹತ್ವದ್ದು, ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು, ಜನರನ್ನು ಸುಲಭವಾಗಿ ತಲುಪಲು ಮತ್ತು ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತಂದು ಕೊಡುವುದರಲ್ಲಿ ಸಹಕಾರಿಯಾಗಿವೆ' ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಜೈನ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣದ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.'ನಾವು ನಿಮ್ಮನ್ನು ತಲುಪಲು, ನಿಮ್ಮ ಅಭಿಪ್ರಾಯವನ್ನು ನಮ್ಮೊಂದಿಗೆ ಹಂಚಿಕೊಳ್ಳಲು ಇರುವ ಅತ್ಯುತ್ತಮ ವೇದಿಕೆ ಸೋಶಿಯಲ್ ಮಿಡಿಯಾ ಆಗಿದೆ ಎಂದರು.

ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸೋಣ

ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸೋಣ

ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ,'ಜೆಡಿಎಸ್ ಹೃದಯವಂತಿಕೆಯುಳ್ಳ ಮತ್ತು ಜನಪರ ಪಕ್ಷವಾಗಿದೆ. ಸಾಮಾನ್ಯರನ್ನು ಗುರುತಿಸಿ ಸ್ಥಾನಮಾನ ನೀಡುವ ಏಕೈಕ ಪಕ್ಷ ಇದಾಗಿದೆ. ಯುವ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯರಿಗೆ ಆಯಾ ವಿಧಾನಸಭಾ ಕ್ಷೇತ್ರದಲ್ಲಿ ತರಬೇತಿ ನೀಡಲಾಗುತ್ತಿದೆ. ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸೋಣ' ಎಂದು ಅವರು ಹೇಳಿದರು.

ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ

ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ

ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ,'ಜೆಡಿಎಸ್ ಪಕ್ಷಕ್ಕೆ ಒಂದು ಸಿದ್ಧಾಂತ ಇದೆ. ಆ ನೆಲೆಗಟ್ಟಿನಲ್ಲಿ ಪಕ್ಷದ ಚಟುವಟಿಕೆಗಳು ನಡೆಯುತ್ತವೆ. ಜೆಡಿಎಸ್ ಶಾಸಕರು ಜನರೊಡನೆ ಇರುತ್ತಾರೆಂಬ ವಿಶೇಷ ಗೌರವ ಇದೆ. ಇದು ನಮಗೆ ಪಕ್ಷ ಕಲಿಸಿಕೊಟ್ಟ ಪಾಠವಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿದ್ದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ' ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಚಂದ್ರುಭೂಪಾಲ ನಾಡಗೌಡ, ಬಿ.ಶ್ರೀಹರ್ಷ, ಶಿವಶಂಕರ ವಕೀಲ, ಕೆ.ಹನುಮೇಶ, ಅಜಯ್ ದಾಸರಿ, ಸೈಯ್ಯದ್ ಆಸೀಫ್, ಜೀವನ್, ಸಲ್ಮಾನ್ ಹಾಗೂ ಬಾಬಾ ಕೋಟೆ, ಪಕ್ಷದ ಮುಖಂಡರಾದ ಕರಿಯಮ್ಮ ಮಾತನಾಡಿದರು .ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಸಿದ್ದು ಬಂಡಿ, ಬುಡ್ಡನಗೌಡ, ರಾಮನಗೌಡ ಏಗನೂರು, ರಾಮಕೃಷ್ಣ, ಬಸವರಾಜ, ಶಿವಶಂಕರ ವಕೀಲ, ಜೆಡಿಎಸ್ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಹಾಗೂ ಯುವ ಮುಖಂಡ ಸುಮಿತ್ ತಡಕಲ್ ಇದ್ದರು.

English summary
mp prajwal revanna said No one has the morality of criticizing the family of former prime Minister hd deve gowda on the issue of family politics. family politics is happening in all parties, prajwal revanna gave an example to those who criticize family politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X