• search
 • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಯಚೂರಿನಲ್ಲಿ ಪ್ರವಾಹ ಭೀತಿ; ಮೂರು ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ

By ರಾಯಚೂರು ಪ್ರತಿನಿಧಿ
|

ರಾಯಚೂರು, ಅಕ್ಟೋಬರ್ 19: ಉತ್ತರ ಕರ್ನಾಟಕ ಭಾಗದಲ್ಲಿ ವಾರದಿಂದ ಅಧಿಕ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇಂದು ಸುಮಾರು 8 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ಹಾಗೂ ಭೀಮಾ ನದಿಗಳಿಂದ ಬಿಡಲಾಗುತ್ತಿದ್ದು, ಗ್ರಾಮಗಳಲ್ಲಿ ಪ್ರವಾಹ ಭೀತಿ ಆರಂಭವಾಗಿದೆ. ಮೂರು ಗ್ರಾಮಗಳನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭೀಮಾನದಿಯಿಂದ 3.40 ಲಕ್ಷ ಕ್ಯೂಸೆಕ್, ಕೃಷ್ಣಾ ನದಿಯಿಂದ 92 ಸಾವಿರ ಕ್ಯೂಸೆಕ್ ಸೇರಿದಂತೆ ಎರಡೂ ನದಿಗಳಿಂದ 4.32 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಸೊನ್ನಾ ಬ್ಯಾರೇಜ್ ನಿಂದ 8 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿಸಿದ್ದು, ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹದ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಸೇನಾ ಹಾಗೂ ಎನ್‍ಡಿಆರ್ ‍ಎಫ್ ತಂಡಗಳು ನಗರದ ಶಕ್ತಿನಗರದಲ್ಲಿ ಬಿಡಾರ ಹೂಡಿವೆ. ನೀರಿನ ಹರಿವು ಹೆಚ್ಚಾದರೆ ಮೂರು ಗ್ರಾಮಗಳನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರ್ಜಾಪುರ, ಬೂರ್ದಿಪಾಡ ಹಾಗೂ ಡಿ ರಾಂಪುರ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತೆ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಮಳೆ

ನಾರಾಯಣಪುರ ಜಲಾಶಯದಂದಲೂ ನೀರು ಬಿಡುತ್ತಿದ್ದು, ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮದ ನದಿಯ‌ ತೀರದಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. 4 ಲಕ್ಷ ಕ್ಯೂಸೆಕ್​​ಕ್ಕೂ ಅಧಿಕ ನೀರು ಕೃಷ್ಣ ನದಿಗೆ ಹರಿಯುತ್ತಿದೆ. ರಾಯಚೂರು ತಾಲೂಕಿನ 17 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿಯ ಪಾತ್ರದಲ್ಲಿರುವ ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಇಂದು ನೆರೆ ಪೀಡಿತ ಪ್ರದೇಶದತ್ತ ಡಿಸಿಎಂ ಹಾಗೂ ರಾಯಚೂರು ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 11:30ಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 2:30ರ ವರೆಗೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

   Political Popcorn with Lavanya : Dr BL Shankar, ಈಗ ಆಗಿರೋದೆ ಸಾಕು ಇನ್ಮೇಲೆ ಚುನಾವಣೆಗೆ ನಿಲ್ಲಲ್ಲಾ!?! Part2

   English summary
   Fear of flood emerges in raichur district. Preparations are under way to shift three villages.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X