ಉಕ್ಕಿ ಹರಿದ ಕೃಷ್ಣೆ: ನೆರೆ ಭೀತಿಯಲ್ಲಿ ಲಿಂಗಸುಗೂರು ತಾಲೂಕಿನ ಹಳ್ಳಿಗಳು
ರಾಯಚೂರು, ಜುಲೈ.20: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷದ 83 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಲವು ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಬೃಹತ್ ಪ್ರಮಾಣದಲ್ಲಿ ನೀರು ಹರಿಯುತ್ತಿರೋದ್ರಿಂದ ನಡುಗಡ್ಡೆ ಗ್ರಾಮಗಳು ಜಲಾವೃತವಾಗಿವೆ. ಅಲ್ಲದೇ, ಈಗಾಗಲೇ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಶೀಲನಹಳ್ಳಿ ಸೇತುವೆಯೂ ಮುಳುಗಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಇದರಿಂದ ಕಡದರಗಡ್ಡಿ, ಯಾಳಗೊಂದಿ, ಹಂಚಿನಾಳ, ಮ್ಯಾದರದೊಡ್ಡಿ ಸೇರಿದಂತೆ ಹಲವು ಗ್ರಾಮಗಳಿಗೆ ಪ್ರವಾಹ ಮುಂದುವರೆದಿದೆ. ಹಲವು ಕಡೆ ಗ್ರಾಮಸ್ಥರು ಸುತ್ತು ಬಳಸಿ ಸಂಚಾರಿಸುವ ಸ್ಥಿತಿ ನಿರ್ಮಾಣವಾಗಿದೆ.

ಪ್ರವಾಹ ಪೀಡಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಪರ್ಕ ಕಡಿತಗೊಂಡ ಮ್ಯಾದರಗಡ್ಡಿ, ಕರಕಲಗಡ್ಡಿ, ವಂಕನದೊಡ್ಡಿಯ ಜನರ ಬಗ್ಗೆ ಮಾಹಿತಿ ಪಡೆದು, ದಿನದ 24 ಗಂಟೆ ಸುರಕ್ಷತೆಗೆ ಜಾಗೃತೆ ವಹಿಸಿ, ಅವರಿಗೆ ಊಟದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications