Ganesh Chaturthi 2023: ರಾಯಚೂರು ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬಲು ಡಿಮ್ಯಾಂಡ್, ದರಗಳ ವಿವರ ಹೀಗಿದೆ
ರಾಯಚೂರು, ಸೆಪ್ಟೆಂಬರ್, 7: ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಬಳಕೆ ಕುರಿತು ಒಲವು ವ್ಯಕ್ತವಾಗಿದೆ. ರಾಸಾಯನಿಕಯುಕ್ತ ಬಣ್ಣದ ಗಣೇಶ ಮೂರ್ತಿಗಳು ಹಾಗೂ ನೀರಿನಲ್ಲಿ ಕರಗದ ಪಿಒಪಿ ಗಣೇಶ ಖರೀದಿ ನಿಷೇಧ ಇದ್ದರೂ ಕದ್ದು ಮುಚ್ಚಿ ಮಾರಾಟ ನಡೆದಿದೆ. ಆದರೆ, ಜನರು ಈ ಬಾರಿ ಮಣ್ಣಿನ ಗಣೇಶ ಖರೀದಿ ಮಾಡುತ್ತಿರುವುದು ವಿಶೇಷವಾಗಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರ ಸ್ಥಳೀಯ ಆಡಳಿತಗಳು ಜಂಟಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ ಬಳಿಕ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟ ಪ್ರಮಾಣ ಭಾರಿ ಪ್ರಮಾಣದಲ್ಲಿ ತಗ್ಗಿದೆ. ನಗರಗಳಲ್ಲಿ ಕದ್ದುಮುಚ್ಚಿ ಪಿಒಪಿ ಮೂರ್ತಿಗಳನ್ನು ಮಾರಾಟ ಮಾಡುತ್ತಿರುವುದು ಬಿಟ್ಟರೆ ಮಾರುಕಟ್ಟೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳು ಹೆಚ್ಚು ಕಂಡು ಬರುತ್ತಿವೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ, ಈ ಬಾರಿ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್‌ಪಿಸಿಬಿ) ಫ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ (ಪಿಒಪಿ) ತಯಾರಿಸುವ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ, 2016ರ ಜುಲೈ 20ರಂದೇ ಅಧಿಸೂಚನೆ ಹೊರಡಿಸಿತ್ತು.
ಆದರೆ, ಅದರ ಕಟ್ಟುನಿಟ್ಟಿನ ಅನುಷ್ಠಾನವಾಗಿಲ್ಲ. ಆದಾಗ್ಯೂ, ಸಂಘ-ಸಂಸ್ಥೆಗಳು, ಪರಿಸರವಾದಿಗಳು ಕೆರೆ, ಕುಂಟೆಗಳ ಮಲಿನಕ್ಕೆ ಕಾರಣವಾಗಿರುವ ಪಿಒಪಿ ಮೂರ್ತಿಗಳನ್ನು ಪೂಜಿಸದಂತೆ ಜನರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಬಂದಿದ್ದರೂ ಸಹ ಅಷ್ಟೇನೂ ಪ್ರತಿಫಲ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಗಳನ್ನು ಹೆಚ್ಚಿನ ಸಂಖ್ಯೆಯ ಜನರು ಖರೀದಿಸಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯ ಸತತ ಪ್ರಯತ್ನಕ್ಕೆ ಫಲ ದೊರಕಿದೆ.
ಪರಿಸರ ಮತ್ತು ಜಲಚರಗಳಿಗೆ ಅಪಾಯಕಾರಿಯಲ್ಲದ ಜೇಡಿ ಮಣ್ಣಿನಿಂದ ಸಿದ್ಧಪಡಿಸಿದ, ನೈಸರ್ಗಿಕ ಬಣ್ಣ ಲೇಪಿತ ವಿಗ್ರಹಗಳನ್ನು ಪೂಜಿಸುವವರ ಸಂಖ್ಯೆ ಕೊಂಚ ಮಟ್ಟಿಗೆ ಪರಿಸರ ಮತ್ತು ಜೀವಿಗಳಿಗೆ ಅಪಾಯಕಾರಿಯಲ್ಲದ ಮೂರ್ತಿಗಳ ಪೂಜೆ, ಜೇಡಿ ಮಣ್ಣು ಮತ್ತು ನೈಸರ್ಗಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವವರ ಸಂಖ್ಯೆ ಕೊಂಚ ಮಟ್ಟಿಗೆ ಜಾಸ್ತಿ ಆಗಿದೆ. ಆ ಮೂಲಕ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಆಚರಿಸಲಾಗುತ್ತಿದೆ.
ಮನೆಗಳಲ್ಲಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸುವವರೆಲ್ಲರೂ ಜೇಡಿ ಮಣ್ಣಿನ ವಿಗ್ರಹಗಳನ್ನೇ ಕೊಂಡುಕೊಂಡಿದ್ದಾರೆ. ಮೈದಾನ, ರಸ್ತೆಗಳಲ್ಲಿ ಉತ್ಸವ ಹಮ್ಮಿಕೊಂಡಿರುವವರು ಮಾತ್ರ ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದಾರೆ. ಇನ್ನು ಗಣೇಶ ಹಬ್ಬ ಬಂತು ಅಂದರೆ ಸಾಕು ಎಲ್ಲಲ್ಲೋ ಸಡಗರ ಸಂಭ್ರಮ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಗಣೇಶನ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ.
ಇತ್ತೀಚೆಗೆ ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಸ್ ಗಣಪನ ಮೂರ್ತಿಗಳು ಬೀದಿ ಬೀದಿಗಳಲ್ಲಿ ಮಾರಾಟವಾಗುತ್ತವೆ. ಇಂತಹ ಸಮಯದಲ್ಲಿ ಮಸ್ಕಿಯಲ್ಲಿ ಬಸವರಾಜ ಬಡಿಗೇರ ಎಂಬ ಯುವಕ ಪರಿಸರ ಸ್ನೇಹಿಯಾಗಿ ಮಣ್ಣಿನಲ್ಲಿ ಗಣೇಶನ ಮೂರ್ತಿ ಮಾಡಿ ಮಾರಾಟ ಮಾಡುವ ಮೂಲಕ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಹೀಗೆ ಬಸವರಾಜ ಬಡಿಗೇರ ಅವರು ಕಳೆದ 6 ವರ್ಷಗಳಿಂದ ತನ್ನ ಮನೆಯಲ್ಲಿಯೇ ಮಣ್ಣಿನಲ್ಲಿ ಗಣೇಶ ಮೂರ್ತಿಗಳನ್ನು ಮಾಡಿ ಮಾರಾಟ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಪ್ರತಿ ಗಣೇಶ ಚೌತಿಗೆ ಏನಿಲ್ಲ ಅಂದರೂ ದೊಡ್ಡ ಹಾಗೂ ಚಿಕ್ಕ ಮೂರ್ತಿಗಳು ಸೇರಿ 80ಕ್ಕೂ ಹೆಚ್ಚು ಮೂರ್ತಿಗಳನ್ನು ಮಾರಾಟ ಮಾಡುತ್ತಾರೆ.
ಪರಿಸರ ಸ್ನೇಹಿ ಚಿಕ್ಕ ಗಣೇಶ ಮೂರ್ತಿ 500 ರಿಂದ 600 ಹಾಗೂ ದೊಡ್ಡ ಗಣಪ ಮೂರ್ತಿ 1,500 ರಿಂದ 2000ಕ್ಕೆ ಮಾರಾಟವಾಗುತ್ತವೆ ಎಂದು ಬಸವರಾಜ ಬಡಿಗೇರ ಹೇಳುತ್ತಾರೆ. ಪರಿಸರಕ್ಕೆ ನಾಶಕ್ಕೆ ಕಾರಣವಾದಂತಹ ಗಣಪತಿ ವಿಗ್ರಹಗಳ ಇಂದಿನ ಮಾರುಕಟ್ಟೆಯಲ್ಲಿ ಪರಿಸರಪ್ರೇಮಿಯಾದ ಗಣೇಶನ ಮೂರ್ತಿ ಖರೀದಿ ಆಗಲಿ ಎಂಬುದು ಬಡಿಗೇರ ಅವರ ಅಭಿಲಾಷೆಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications